ಬೆಂಗಳೂರು- ಯಾವುದೇ ಷರತ್ತು ಹಾಕದೇ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬರುವುವರಿಗೆ ಮುಕ್ತ ಅವಕಾಶ ನೀಡಲಾಗುವುದು ಎಂದು ಕೆ ಪಿ ಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದ್ಯದಲ್ಲಿಯೇ ಕಾಂಗ್ರೆಸ್ ತೊರೆದು ಬೇರೆ ಪಕ್ಷ ಸೇರಿದವರಿಗೆ ಮರಳಿ ಆಹ್ವಾನ ನೀಡಲಾಗುವುದು. ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಗೆ ಬಂದರೆ, ಸಂತೋಷದಿಂದ ಅವರನ್ನು ಬರಮಾಡಿಕೊಳ್ಳಲಾಗುವುದು ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಮುಂದೆ ಈ ವರ್ಷ ಹಲವಾರು ಸವಾಲುಗಳಿವೆ. ಆ ಸವಾಲುಗಳನ್ನು ನಾವು ಮೆಟ್ಟಿನಿಲ್ಲಬೇಕಿದೆ. ಈ ವರ್ಷ ಸಂಪೂರ್ಣವಾಗಿ ಪಕ್ಷ ಸಂಘಟನೆಗೆ ಮೀಸಲಿಡಬೇಕು ಒಂದು ವರ್ಷ ಸಂಪೂರ್ಣವಾಗಿ ಪಕ್ಷ ಸಂಘಟನೆ ಮಾಡಬೇಕು ಎಂದಿದ್ದಾರೆ.