ರಸ್ತೆ ಕಾಮಗಾರಿ  ಪೂರ್ಣ ಗೊಳಿಸಿ ;ಗ್ರಾಮಸ್ಥರಿಂದ ಒತ್ತಾಯ.

0

ಕಾನಹೊಸಹಳ್ಳಿ ಯ ಗ್ರಾಮ ಪಂಚಾಯಿತಿ ಕಾರ್ಯಾಲಯ ದ ಹಾಗೂ ಸಾರ್ವಜನಿಕ ಬಸ್ ನಿಲ್ದಾಣದ ಮಧ್ಯಭಾಗದಲ್ಲಿರುವ ಸಾರ್ವಜನಿಕರು ಹಾಗೂ ವಾಹನಗಳು ಸಂಚರಿಸುವ ರಸ್ತೆಯ ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ಪೂರ್ಣಗೊಳಿಸಿ ಇಲ್ಲಿ ಆಗುವ ಅನಾಹುತಗಳನ್ನು ತಪ್ಪಿಸಿ. ಹೊಸಹಳ್ಳಿ ಗ್ರಾಮವು ಹೋಬಳಿ ಕೇಂದ್ರವಾಗಿದ್ದು ದಿನನಿತ್ಯ ಸಾವಿರಾರು ಜನರು ವ್ಯಾಪಾರ ವಹಿವಾಟುಗಳಿಗೆ ಸರ್ಕಾರಿ ಕಚೇರಿಗಳಿಗೆ ವಾಹನಗಳ ಮೂಲಕ ಸಂಚರಿಸುತ್ತಿದ್ದಾರೆ.

ಕಾನಹೊಸಹಳ್ಳಿ ಯಲ್ಲಿ ಸಾರ್ವಜನಿಕ ರಸ್ತೆಯ ಅಗಲೀಕರಣದ ಕಾಮಗಾರಿಯು ಸಂಪೂರ್ಣ ಗೊಂಡಿದ್ದು ಕಾನಹೊಸಹಳ್ಳಿ ಗ್ರಾಮಪಂಚಾಯಿತಿ ಹಾಗೂ ಸಾರ್ವಜನಿಕ ಬಸ್ ನಿಲ್ದಾಣದ ಮಧ್ಯಭಾಗದಲ್ಲಿರುವ ಮುಖ್ಯ ರಸ್ತೆಯು ಕಾಮಗಾರಿ ಮುಂದುವರಿಯದೆ ಇರುವುದರಿಂದ  ರಸ್ತೆಯ ಮಧ್ಯ ಭಾಗದಲ್ಲಿ ಗುಂಡಿಗಳು ಆಗಿದ್ದು ಮಳೆಯನೀರು ನಿಂತು ಕೆಸರುಗದ್ದೆ ಯಾಗಿ ವಾಹನಗಳಿಗೂ ಹಾಗೂ ಸಾರ್ವಜನಿಕರಿಗೆ ಓಡಾಡಲು ಬಹಳ ತೊಂದರೆಯಾಗಿರುತ್ತದೆ. ಮಳೆಯ ನೀರು ಬಸ್ ನಿಲ್ದಾಣದ ಒಳಗಡೆ ನುಗ್ಗಿ ನಿಲ್ದಾಣದ ತಡೆಗೋಡೆಯು ಸಹ ಕುಸಿದು ಬೀಳುವ ಸಂಭವವಿರುತ್ತದೆ.

ಈ ರಸ್ತೆಯಲ್ಲಿ ಸುಮಾರು ಬಾರಿ ಅಪಘಾತಗಳು ಸಂಭವಿಸಿವೆ, ಈ ಹಿಂದೆ  ಈ ಕಾಮಗಾರಿಯ ವಿಚಾರವಾಗಿ ಮಾಧ್ಯಮದಲ್ಲಿ ಪ್ರಕಟಣೆ ಮಾಡಿದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳಿಂದ ಯಾವುದೇ ಪ್ರಯೋಜನವಾಗಿಲ್ಲ, ಗ್ರಾಮ ಪಂಚಾಯಿತಿ ಸದಸ್ಯರು ಊರಿನ ಮುಖಂಡರು ಸಾರ್ವಜನಿಕರು ಕೂಡ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು ಕೂಡ ಈ ರಸ್ತೆಯ ಕಾಮಗಾರಿಯನ್ನು ಮುಂದುವರಿಸಿದೆ ಇರುವ ಕಾರಣ ಕೊನೆಯದಾಗಿ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ಇಲ್ಲಿ ಆಗುವ ಅನಾಹುತಗಳನ್ನು ತಪ್ಪಿಸಿ ಸಾರ್ವಜನಿಕರಿಗೂ ಹಾಗೂ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಎರ್ರಿಸ್ವಾಮಿ ರೆಡ್ಡಿಯವರು, ಕುಲುಮೆ ಹಟ್ಟಿ ಈಶ್ವರಪ್ಪ, ವೀರೇಶ್ ಕಿಟ್ಟಪ್ಪ ನವರು , ಟಿ ಗಂಗಾಧರ, ನರಸಿಂಹ ಮೂರ್ತಿ ಸೇರಿದಂತೆ ಸಾರ್ವಜನಿಕ ಉಪಸ್ಥಿತರಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply