ಬಳ್ಳಾರಿ-  ದೇಶದಲ್ಲಿ ದಿನಬಳಕೆಯ ವಸ್ತುಗಳು ಸೇರಿದಂತೆ ಪೆಟ್ರೋಲ್ ಡೀಸೆಲ್ ಬೆಲೆ ಗಗನಕ್ಕೆ ಏರಿದೆ‌. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಳತ ರೂಡ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಮಾಡಲು ಮುಂದಾಗಿದೆ. ಈಗಾಗಲೇ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮಾಡುತಿದ್ದು ನಾಳೆ ಗಣಿ ನಾಡು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಗೆ ಕರೆ ನೀಡಿದೆ. ಇನ್ನು ಬಳ್ಳಾರಿಯಲ್ಲಿ ಒಡದೆ ಮನೆಯಾಗಿರುವ ಕಾಂಗ್ರೆಸ್ ನಾಳೆ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ತನ್ನ ಒಗ್ಗಟ್ಟು ಪ್ರದರ್ಶನ ಮಾಡಲಿದೆ.

ಈಗಾಗಲೇ ಜಿಲ್ಲಾ ಕಾಂಗ್ರೆಸ್ ನಲ್ಲಿ ನಾಳಿನ ಪ್ರತಿಭಟನೆಗೆ ಭರ್ಜರಿ ತಯಾರಿ ನಡೆಸಿದ್ದು ನಾಳೆ ಬೃಹತ್ ಪ್ರತಿಭಟನೆ ಮಾಡುವ ಮೂಲಕ ತನ್ನ ಒಗ್ಗಟ್ಟು ಪ್ರದರ್ಶನ ಮಾಡಲಿದೆ. ಈಗಾಗಲೇ ಎಲ್ಲಾ ವಿಭಾಗದ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ. ನಾಳೆ ಕಾಂಗ್ರೆಸ್ ಕಾರ್ಯಕರ್ತರು  ಬೆಳಗ್ಗೆ 10.30 ಗಂಟೆಗೆ ರಾಯಲ್ ವೃತ್ತದಲ್ಲಿ, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಇಂಧನ ಮತ್ತು ತೈಲ ಬೆಲೆ ಏರಿಕೆಗಳನ್ನು ಖಂಡಿಸಿ, ಬೃಹತ್ ಪ್ರತಿಭಟನೆಯನ್ನು ಮಾಡಿ, ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply