. ‘100 ನಾಟೌಟ್’   ಎಂಬ ಫಲಕಗಳನ್ನು ಹಿಡಿದು ಕಾಂಗ್ರೆಸ್ ಪ್ರತಿಭಟನೆ.

0

ರಾಯಚೂರು – ತೈಲ ಬೆಲೆಯೇರಿಕೆಯನ್ನು ವಿರೋಧಿಸಿ, ಕೇಂದ್ರ ಸರಕಾರದ ವಿರುದ್ಧ ರಾಯಚೂರು ಜಿಲ್ಲಾ ಕಾಂಗ್ರೆಸ್ ನಿಂದ ನಗರದ ಗೋವಿಂದ್ ರಾವ್ ಪೆಟ್ರೋಲ್ ಪಂಪ್ ಮುಂದೆ ವಿನೂತನ ಪ್ರತಿಭಟನೆ ನಡೆಸಿದರು. ‘100 ನಾಟೌಟ್’ ಎಂಬ ಹೆಸರಿನಲ್ಲಿ ಫಲಕಗಳನ್ನು ಹಿಡಿದು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರೆಲ್ ಗೆ 140 ಡಾಲರ್ ಇದ್ದಾಗಲೂ ಮೇಲಿದ್ದರೂ 70 ವರ್ಷದಲ್ಲಿ ಪೆಟ್ರೋಲ್ ಗೆ 70 ರೂ. ಏರಿಕೆಯಾಗದಂತೆ ಕಾಂಗ್ರೆಸ್ ನೋಡಿಕೊಂಡಿತ್ತು. ಇದೀಗ ಬ್ಯಾರೆಲ್ ಬೆಲೆ ಅತೀ ಕಡಿಮೆ ಆಗಿದ್ದರೂ ಇಂಧನ ತೈಲ ಬೆಲೆಯನ್ನೂ ನಿರಂತವಾಗಿ ಏರಿಕೆ ಮಾಡುತ್ತಿದೆ. ಅದರಲ್ಲೂ ಇಂತಹ ಕೊರೊನಾ ಎಂಬ ಸಂದಿಗ್ಧ ಸಮಯದಲ್ಲಿ, ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಬದುಕಿ ಜೀವನ ಮಾಡುವುದೇ ಕಷ್ಟಕರವಾಗಿದೆ ಅದರಲ್ಲೂ ಇಂತಹ ತೈಲ ಬೆಲೆ ಏರಿಕೆಯಿಂದ ಜೀವನ ಮತ್ತಷ್ಟು ದುಸ್ತರವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply