ಕೊಟ್ಟೂರು: ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಘಟಕ ವತಿಯಿಂದ ಪೆಟ್ರೋಲ್ ಬಂಕ್ ಗಳ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿತು.

ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಂ.ಜಿ. ಮಲ್ಲಿಕಾರ್ಜುನ್ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸಾರ್ವಜನಿಕರಿಂದ ಕೋವಿಡ್ ಸಮಯದಲ್ಲಿ ತೈಲ ಬೆಲೆ ಏರಿಸುವ ಮೂಲಕ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಆಕರ್ಷ ಎಚ್ .ಸಿ. ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಪಿ. ಇಂದ್ರಜಿತ್, ಹ್ಯಾಳ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಎಚ್.ರಾಘವೇಂದ್ರ, ಯುವ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಅರಮನೆ, ಕಾಂಗ್ರೆಸ್ ಮುಖಂಡರಾದ ಮಹಮ್ಮದ್ ರಫೀಕ್ ಇನ್ನು ಮುಂತಾದವರು ಇದ್ದರು.

IMG_20210611_125637.jpg

Email

Huligesh Tegginakeri

About Author

Huligesh Tegginakeri

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಕಳೆದ ಎಂಟು ವರ್ಷಗಳ ಕಾಲ ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದೇನೆ.. ವಿಶೇಷ, ವಿಭಿನ್ನ ರೀತಿಯ ಸುದ್ದಿಗಳನ್ನು ಕಲೆಹಾಕಿ ಬರೆಯುವುದೇ ನನ್ನ ಹವ್ಯಾಸ..

Leave A Reply