ಪುಣೆ- ಕರೋನಾ ಎರಡನೇ ಅಲೆ ಆರಂಭವಾದ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯ ಮತ್ತ ಹೆಚ್ಚಳವಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇನ್ನು ಸರ್ಕಾರ ಶಾಲೆಗಳನ್ನು ತಾತ್ಕಾಲಿಕವಾಗಿ ಮತ್ತೆ ಮುಚ್ಚುವಂತೆ ಆದೇಶ ಮಾಡಿದೆ. ಇನ್ನು ಯಾವುದೇ ಸಭೆ ಸಮಾರಂಭಗಳಲ್ಲಿ 200 ಕ್ಕೂ ಹೆಚ್ಚಿನ ಜನ ಸೇರಿದಂತೆ ನಿರ್ಬಂಧ ಹೇರಲಾಗಿದೆ.‌ ಅಲ್ಲದೇ ಯಾವುದೇ ಸಾರ್ವಜನಿಕ ಸಭೆ ಸಮಾರಂಭ ನಡೆಸುವ ಮುನ್ನ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅಲ್ಲದೆ ಕರೋನಾ ನಿಯಂತ್ರಣಕ್ಕೆ ಸರ್ಕಾರ ನೈಟ್ ಕರ್ಪ್ಯೂ ಜಾರಿ ಮಾಡಿದ್ದು. ಅಗತ್ಯ ಸೇವೆಗಳಿಗೆ ಹೊರತಾಗಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಜನರು ಮನೆಯಿಂದ ಹೊರಗೆ ಬರುವಂತಿಲ್ಲ. ಫೆ.28ರ ವರೆಗೆ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ನಾಳೆಯಿಂದ ಈ ಹೊಸ ಮಾರ್ಗಸೂಚಿ ಜಾರಿಯಾಗಲಿದೆ ಎಂದು ಪುಣೆ ವಿಭಾಗೀಯ ಆಯುಕ್ತ ಸೌರವ್ ರಾವ್ ತಿಳಿಸಿದ್ದಾರೆ

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply