ಬೆಂಗಳೂರು- ಕಳೆದ ಒಂದು ತಿಂಗಳಿಂದ ಮತ್ತೆ ಹಾವಳಿ ಇಟ್ಟ ರೂಪಾಂತರ ಕರೋನ ಸೋಂಕು ರಾಜ್ಯದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ.  ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ‌.

ಕಳೆದ ಒಂದು ವಾರದಿಂದ ಕರೋನಾ ಸೋಂಕಿತರ ಸಂಖ್ಯೆ ಏರಿಕೆ ಕಂಡು ಬಂದಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ನಿನ್ನೆ  ಮತ್ತಷ್ಟು ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.

ಇನ್ನೂ ಇಂದು ಕೋವಿಡ್ ಸೋಂಕಿತರಲ್ಲಿ  ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ ಈವರೆಗೆ 64 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ತಿಂಗಳು 10 ದಿನಗಳ ಅವಧಿಯಲ್ಲಿ 5,550 ಮಂದಿ ಕೊರೊನಾ ಸೋಂಕಿತರಾಗಿರುವುದು ಖಚಿತಪಟ್ಟಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply