ಕೋವಿಡ್ 3ನೇ ಅಲೆ ಸಮರ್ಥವಾಗಿ ಎದುರಿಸಲು ತರಬೇತಿ

0

ಬಳ್ಳಾರಿ  – ಬಳ್ಳಾರಿ ಜಿಲ್ಲಾಡಳಿತ, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಒತ್ತಾಸೆಯಂತೆ ಬಳ್ಳಾರಿ ತೀವ್ರ ನಿಗಾ ಘಟಕದಲ್ಲಿ ಕಾರ್ಯ ನಿರ್ವಹಿಸುವ ಶುಶ್ರೂಷಕರಿಗೆ ನಿರೀಕ್ಷಿತ ಕೋವಿಡ್-19 ಮೂರನೇ ಅಲೆಯ ಹಿನ್ನೆಲೆಯಲ್ಲಿ 10 ದಿನಗಳ ತರಬೇತಿ ಕಾರ್ಯಕ್ರಮವು ವಿಮ್ಸ್ ನ ಅರವಳಿಕೆ ಶಾಸ್ತ್ರ ವಿಭಾಗ ಹಾಗೂ ಮಕ್ಕಳ ವಿಭಾಗದ ನೇತೃತ್ವದಲ್ಲಿ ಪಿ.ಎಂ.ಎಸ್.ಎಸ್.ವೈ ಟ್ರಾಮಾಕೇರ್ ಆಸ್ಪತ್ರೆಯ ಭೋಧನಾ ಕೊಠಡಿಯಲ್ಲಿ ಆರಂಭವಾಗಿದೆ.

ಮಹಾನಗರಪಾಲಿಕೆಯ ಆಯುಕ್ತರಾದ ಪ್ರೀತಿ ಗೆಹ್ಲೋಟ್‍ ಅವರು ತರಬೇತಿಗೆ ಚಾಲನೆ ನೀಡಿ ಮಾತನಾಡಿ, ಕೋವಿಡ್ 3ನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಈ ತರಬೇತಿ ಅತ್ಯವಶ್ಯಕವಾಗಿದ್ದು, ಎಲ್ಲರೂ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ವಿಮ್ಸ್ ನ ನಿರ್ದೇಶಕರಾದ ಡಾ.ಟಿ.ಗಂಗಾಧರ್‍ಗೌಡ ಅವರು ಮಾತನಾಡಿ 2ನೇ ಅಲೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ತಂಡವಾಗಿ ಕಾರ್ಯ ನಿರ್ವಹಿಸಿದರೆ 3ನೇ ಅಲೆಯನ್ನು ಸಹ ಅತ್ಯಂತ ಯಶಸ್ವಿಯಾಗಿ ಎದುರಿಸಬಹುದು ಎಂದು ಹೇಳಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply