ಮಂಗಳೂರು  – ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕೃಷಿ ಕಾನೂನನ್ನು ಹಿಂಪಡೆಯಲು ಹಾಗೂ ಕೃಷಿಗೆ ಕನಿಷ್ಟ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ದೆಹಲಿಯ ಗಡಿ ಪ್ರದೇಶದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಆರು ತಿಂಗಳು ಪೂರ್ತಿಯಾದ ಹಿನ್ನಲೆಯಲ್ಲಿ ದೇಶದ ರೈತ ಸಂಘಟನೆಗಳ ಒಕ್ಕೂಟವು ದೇಶಾದ್ಯಂತ ಕರಾಳ ದಿನವನ್ನಾಗಿ ಆಚರಿಸಲು ಕರೆ ಕೊಟ್ಟಿತ್ತು.

ಈ ಆಂದೋಲನಕ್ಕೆ SDPI ರಾಷ್ಟ್ರೀಯ ಸಮಿತಿಯು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿತ್ತು. ಆ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಕ್ಷದ ವತಿಯಿಂದ  ಪ್ರತಿಭಟನೆಯು ಯಶಸ್ವಿಯಾಗಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ವ್ಯಾಪ್ತಿಯ ನಗರ, ಗ್ರಾಮಾಂತರ ಪ್ರದೇಶದ 100 ಕ್ಕೂ ಹೆಚ್ಚಿನ ಕಡೆಗಳಲ್ಲಿ  SDPI ಪಕ್ಷದ ಕಾರ್ಯಕರ್ತರು, ನಾಯಕರು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಕಪ್ಪು  ಬಾವುಟ ಹಾಗೂ ಪ್ಲೇಕಾರ್ಡ್ ಪ್ರದರ್ಶಿಸಿ ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಹಾಗೂ ರೈತರಿಗೆ ನೈತಿಕ ಬೆಂಬಲ ನೀಡುವ  ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಪಕ್ಷದ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ನಾಯಕರು ಕಾರ್ಯಕರ್ತರು ತಮ್ಮ ತಮ್ಮ ಮನೆ ಮತ್ತು ವಾಹನಗಳಿಗೆ ಕಪ್ಪು ಬಾವುಟ ಕಟ್ಟುವ ಮೂಲಕ ಕರಾಳ ದಿನವನ್ನು ಆಚರಿಸಿದರು. ವಿವಿಧ ಕಡೆಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ರಾದ ಅಥಾವುಲ್ಲಾ ಜೋಕಟ್ಟೆ, ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ರಿಯಾಝ್ ಫರಂಗಿಪೇಟೆ, ರಾಜ್ಯ ಮುಖಂಡರಾದ ಇಕ್ಬಾಲ್ ಬೆಳ್ಳಾರೆ  ಜಿಲ್ಲಾ ನಾಯಕರಾದ IMR ಇಕ್ಬಾಲ್, ಅನ್ವರ್ ಸಾದತ್ ಬಜತ್ತೂರು, ಶಾಹುಲ್ ಹಮೀದ್ ಪರ್ಲಿಯಾ, ಜಮಾಲ್ ಜೋಕಟ್ಟೆ, ಅಶ್ರಫ್ ಮಂಚಿ,ಕಾದರ್ ಫರಂಗಿಪೇಟೆ  ಹಾಗೂ ಇತರ ಸ್ಥಳೀಯ ನಾಯಕರು ಭಾಗವಹಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply