ದರ್ಶನ್ ಕೆಲಸಕ್ಕೆ ಕೈ ಜೋಡಿಸಿದ ಉಪ್ಪಿ

0

ಬೆಂಗಳೂರು – ಚಾಲೆಂಜಿಂಗ್  ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳು ಅಂದರೆ ಎಷ್ಟು ಪ್ರೀತಿ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಆದ್ರೆ ಇವರ ಪ್ರತಿಯ ಕರೆಗೆ ರೀಯಲ್ ಸ್ಟಾರ್ ಉಪ್ಪಿ ಅವರು ಸಹ ಕೈ ಜೋಡಿಸಿದ್ದಾರೆ‌. ಲಾಕ್ ಡೌನ್ ಸಮಯದಲ್ಲಿ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯಲು ದರ್ಶನ್ ಅವರು ಕರೆ ನೀಡಿದ್ದರು. ಅದಕ್ಕೆ ರಾಜ್ಯದ ನಾನಾ ಮೂಲೆಗಳಿಂದ ಜನರು ಡಿ ಬಾಸ್ ಕರೆಗೆ ಓಗೊಟ್ಟು ತಮ್ಮ ಕೈಲಾದ ಸಹಾಯವನ್ನು ಮಾಡಿದ್ದರು. ಈಗ ಉಪ್ಪಿ ಅವರು ಆಫ್ರಿಕಾದ ಆನೆಯನ್ನು ದತ್ತು ಪಡೆಯುವ ಮೂಲಕ ಡಿ ಬಾಸ್ ಕೆಲಸಕ್ಕೆ ಕೈ ಜೋಡಿಸಿದ್ದಾರೆ. ಈ ಕುರಿತು ಉಪೇಂದ್ರ ಅವರು ತಮ್ಮ ಟ್ವಿಟರ್ ಕಾಥೆಯಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ.

ಪ್ರಾಣಿಗಳೇ ಗುಣದಲಿ ಮೇಲು….
ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಘಾಲಯ ದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದು ಈ ಮೂಲಕ ದರ್ಶನ್ ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇವೆ.
-ನಿಮ್ಮ ಉಪೇಂದ್ರ ಎಂದು ಬರೆದುಕೊಂಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply