ಖಾಸಗಿ ಆಸ್ಪತ್ರೆಯೊಂದರಲ್ಲಿನ ಹಗಲು ದರೋಡೆಯನ್ನು ಪ್ರಶ್ನಿಸಿ ಪ್ರತಿಭಟನೆ…!

0

ಮಂಗಳೂರು – ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆಯುತ್ತಿದ್ದ ಹಗಲು ದರೋಡೆಯನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ್ದ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊರೋನಾ ಸೊಂಕಿಗೆ ಬಲಿಯಾಗಿದ್ದ ವ್ಯಕ್ತಿಯ ಕುಟುಂಬಕ್ಕೆ ಮೃತದೇಹ ನೀಡದೇ ಹತ್ತು ಲಕ್ಷ ಬಿಲ್ ನೀಡುವಂತೆ ಒತ್ತಾಯಿಸಿದ್ದ ಖಾಸಗಿ ಆಸ್ಪತ್ರೆಯ ವಿರುದ್ಧ ಸುಹೈಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇತ್ತೀಚೆಗೆ ಪ್ರತಿಭಟನೆ ನಡೆಸಿ, ಮೃತದೇಹವನ್ನು ಸಂತ್ರಸ್ತ ಕುಟುಂಬಕ್ಕೆ ನೀಡುವಂತೆ ಒತ್ತಾಯಿಸಿದ್ದರು. ಪ್ರತಿಭಟನೆಗೆ ಮಣಿದ ಆಸ್ಪತ್ರೆಯವರು ಮೃತದೇಹವನ್ನು ಹಸ್ತಾಂತರಿಸಿದ್ದರು.

ಇಂದು ಖಾಸಗಿ ಆಸ್ಪತ್ರೆಯವರು ಮಂಗಳೂರು ನಗರ ಠಾಣೆಯಲ್ಲಿ ಸುಹೈಲ್ ಕಂದಕ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಸುಹೈಲ್ ಕಂದಕ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬಂಧನವನ್ನು ಖಂಡಿಸಿ ಮಂಗಳೂರಿನ ಕಂಕನಾಡಿ ಗರೋಡಿ ನಾಗೂರಿ ಪೊಲೀಸ್ ಠಾಣೆ ಎದುರು ಧರಣಿ ನಡೆಯಿತು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply