ಕೋವಿಡ್ ನಿಂದ ಮೃತ ಪಟ್ಟ ರೈತರ ಸಾಲ ಮುನ್ನಾ..

0

ಮಂಗಳೂರು

ಕೋವಿಡ್ ನಿಂದ ಮೃತಪಟ್ಟ ಸಾಲಗಾರ ರೈತರ ಸಾಲ ಮನ್ನ ಮಾಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಮಂಗಳೂರು ಪ್ರವಾಸದಲ್ಲಿ ಇರುವ ಅವರು ಮಾಧ್ಯಮ ಪ್ರತಿನಿಧಿಗಳ  ಜೊತೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್‌ನಿಂದ 10,400 ಮಂದಿ ಸಾಲಗಾರ ರೈತರು ಮೃತಪಟ್ಟಿದ್ದಾರೆ, ಅವರ ಒಟ್ಟು ಸಾಲದ ಮೊತ್ತದಲ್ಲಿ ತಲಾ 1 ಲಕ್ಷ ರೂಪಾಯಿ ಮೊತ್ತವನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ಸರ್ಕಾರಕ್ಕೆ 81 ಕೋಟಿ ರೂಪಾಯಿ ಹೊರೆಯಾಗಲಿದೆ. ಆದ್ರೆ ಸರ್ಕಾರ ಇವೆರಲ್ಲಾ ಒಂದು ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲು ಸಿದ್ದವಾಗಿದೆ ಎಂದಿದ್ದಾರೆ. ಸರ್ಕಾರ ಈಗಾಗಲೇ ನಿರ್ಧಾರ ಮಾಡಿದ್ದು ಮುಂದಿನ ಕೆಲ ದಿನಗಳಲ್ಲಿ ಈ ಆದೇಶ ಹೊರಬರಲಿದೆ‌. ಇದರಿಂದಾಗಿ ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ ಸಹಕಾರಿಯಾಗಲಿದೆ ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply