ಅಕ್ರಮವಾಗಿ ಎಲ್‌ಎಸ್‌ಡಿ ಮಾದಕ ವಸ್ತು ಮಾರಾಟಗಾರನ ಬಂಧನ

0

ಮಂಗಳೂರು – ಅಕ್ರಮವಾಗಿ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವಾದ ಎಲ್‌ಎಸ್‌ಡಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕೇರಳ ಮೂಲದ ಆರೋಪಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ.

ಬಂಧಿತನನ್ನು  ಮುಹಮ್ಮದ್ ಅಜಿನಾಸ್ ಎಂದು ಗುರುತಿಸಲಾಗಿದೆ. ಈತ ಮೂಲತಃ ಕೇರಳ ಕ್ಯಾಲಿಕಟ್ ಮುಟ್ಟಂಗಲ್ ನಿವಾಸಿಯಾಗಿದ್ದು ಪ್ರಸ್ತುತ ಕದ್ರಿಯ ಪಿಜಿಯಲ್ಲಿ ವಾಸಿಸುತ್ತಿದ್ದ. ಈತನಿಂದ 16.80 ಲಕ್ಷ ರೂಪಾಯಿ ಮೌಲ್ಯದ ಒಟ್ಟು 15 ಗ್ರಾಂ 15 ಮಿಲಿ ಗ್ರಾಂ ತೂಕ ಇರುವ 840 ಎಲ್‌ಎಸ್‌ಡಿ ಸ್ಟ್ಯಾಂಪ್, ಮೋಟರ್ ಬೈಕ್, 2 ಮೊಬೈಲ್ ಫೋನ್ ಸೇರಿದಂತೆ 17,15,500 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎಲ್‌ಎಸ್‌ಡಿ ಒಂದು ಸ್ಟ್ಯಾಂಪ್‌ಗೆ 2 ಸಾವಿರದಿಂದ 6 ಸಾವಿರ ರೂಪಾಯಿ ಮೌಲ್ಯ ಇದೆ. ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಕದ್ರಿ ಮೈದಾನದ ಬಳಿ ಬಂಧಿಸಿದ್ದಾರೆ. ಆರೋಪಿ ಐಷಾರಾಮಿ ವ್ಯಕ್ತಿಗಳಿಗೆ ಇದನ್ನು ಮಾರಾಟ ಮಾಡುತ್ತಿದ್ದ. ಈತ ಮಂಗಳೂರು ನಗರ, ಕಾಸರಗೋಡು, ಗೋವಾಕ್ಕೂ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply