ಶಾಸಕ ಎಂ.ಎಸ್ ಸೋಮಲಿಂಗಪ್ಪ ಅವರಿಂದ ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಣೆ

0

ಬಳ್ಳಾರಿ – ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್ ಸಂಕಷ್ಟದಲ್ಲಿರುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರು ಕಾರ್ಮಿಕ ಇಲಾಖೆಯ ಅಧಿಕಾರಿಗಳ ಜತೆಗೂಡಿ ಶುಕ್ರವಾರ ಆಹಾರ ಸಾಮಾಗ್ರಿ ವಿತರಿಸಿದರು.

ಕೋವಿಡ್ ಹಿನ್ನಲೆಯಲ್ಲಿ ಕೆಲಸವಿಲ್ಲದೇ ದುಡಿಯುವ ಕಾರ್ಮಿಕ ವರ್ಗವು ಸಂಕಷ್ಟದಲ್ಲಿರುವುದನ್ನು ಕಂಡು ಸರ್ಕಾರದಿಂದ ಹಾಗೂ ಶಾಸಕರು ವೈಯಕ್ತಿಕವಾಗಿ ಸಿರುಗುಪ್ಪ ತಾಲೂಕಿನ ಎಲ್ಲಾ ಗ್ರಾಮಗಳ ಸದಸ್ಯರಿಗೆ ಆಹಾರ ಸಾಮಗ್ರಿ ವಿತರಿಸಿದರು. 5.ಕೆ.ಜಿ ಅಕ್ಕಿ, ಬೇಳೆ, ಗೋದಿಹಿಟ್ಟು, ಸಕ್ಕರೆ, ಅಡುಗೆ ಎಣ್ಣೆ, ಉಪ್ಪು, ಕಾರ ಹಾಗೂ ಮಸಾಲೆ ಪದಾರ್ಥಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ಈ ಸಮಯದಲ್ಲಿ ಪಟ್ಟಣ ಪಂಚಾಯತಿಯ ಅಧ್ಯಕ್ಷರಾದ ಲಕ್ಷ್ಮೀ ಕೆ.ಮಾರುತಿ ಮಾತನಾಡಿ, ಇಲಾಖೆಯಿಂದ ಹಲವಾರು ಸೌಲಭ್ಯಗಳಿದ್ದು ಎಲ್ಲಾ ಕಟ್ಟಡ ಕಾರ್ಮಿಕರು ಪಡೆದುಕೊಳ್ಳಿ, ನಿಮ್ಮ ಜೀವನ ಸುಧಾರಣೆಗೆ ಸರ್ಕಾರದ ನೆರವು ಸದಾಕಾಲ ಹೀಗೆ ಇರುತ್ತದೆ ಎಂದು ತಿಳಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply