35ನೇ  ಜನಸಂಖ್ಯೆ ದಿನಾಚರಣೆ ಆಚರಿಸಿದ   ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ.

0

ವಿಜಯಪುರ –

ವಿಜಯಪುರ ನಗರದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ  35ನೇ ಜನಸಂಖ್ಯಾ ದಿನಾಚರಣೆ ಆಚರಣೆ ಮಾಡಲಾಯಿತು.  ಕಾರ್ಯಕ್ರಮವನ್ನು  ಜಿಲ್ಲಾ ಮಲೇರಿಯಾ ಅಧಿಕಾರಿಗಳು ಜೈಬುನ್ನಿಸ ಬೀಳಗಿ  ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ರಾಜೇಶ್ವರಿ ಗೋಲಗೇರಿ  ಮಾತನಾಡಿ  ಜನಸಂಖ್ಯಾ ನಿಯಂತ್ರಣಕ್ಕೆ ಮಹಿಳೆಯರಿಗೆ  ಸರಕಾರಿ ಆಸ್ಪತ್ರೆಯಲ್ಲಿ   ಪ್ರಾಥಮಿಕ ಆರೋಗ್ಯ ಕೇಂದ್ರ ತಾಲೂಕು ಆರೋಗ್ಯ ಕೇಂದ್ರ ಜಿಲ್ಲಾಸ್ಪತ್ರೆಯಲ್ಲಿ ಸಾಕಷ್ಟು ಉಚಿತ ಯೋಜನೆಗಳಿವೆ ತಾತ್ಕಾಲಿಕ ಹಾಗೂ ಶಾಶ್ವತ ಯೋಜನೆಗಳ ಮೂಲಕ ಜನಸಂಖ್ಯೆ ನಿಯಂತ್ರಣ ಮಾಡಿಕೊಳ್ಳಬಹುದು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ  ಡಾಕ್ಟರ್ ಜಿಎಂ ಕೊಲ್ಲೂರು ಮಾತನಾಡಿ ಜನಸಂಖ್ಯೆ ನಿಯಂತ್ರಣ ಮಾಡಲು ಹೊಸ ಹೊಸ ಯೋಜನೆಗಳನ್ನು ಗ್ರಾಮಮಟ್ಟದಿಂದ ನಗರ ಮಟ್ಟದವರೆಗೂ ಅನುಷ್ಠಾನ ಮಾಡುತ್ತಿದ್ದೇವೆ ,. ಮೊದಲು ಅಂತರ ಇಂಜೆಕ್ಷನ್  ಖಾಸಗಿ ಆಸ್ಪತ್ರೆಯಲ್ಲಿ ಮಾತ್ರ ದೊರೆತಿದ್ದವು ಈಗ ಸರಕಾರಿ ಆಸ್ಪತ್ರೆಗಳಲ್ಲಿ ದೊರೆಯುತ್ತಿವೆ.   ಜಿಲ್ಲೆಯಲ್ಲಿ ಕಳೆದ ವರ್ಷ ಸುಮಾರು 26 ಜನರಿಗೆ ಪುರುಷ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ.  ಸಮುದಾಯದ ಪಾತ್ರ ಅತಿ ಮುಖ್ಯವಾಗಿದೆ ಹೆಚ್ಚು ಹೆಚ್ಚು ಮಕ್ಕಳು ಬೇಕು ಅನ್ನೋ ಹಂಬಲ .ಹೆಚ್ಚು ಮಕ್ಕಳು ಹೊಂದಿದ್ದರೆ ಮಕ್ಕಳಲ್ಲಿ ಅನಾರೋಗ್ಯ ಸಮಸ್ಯೆ ಉಂಟಾಗುತ್ತದೆ,  ಎಂದು ಹೇಳಿದ್ದಾರೆ.

ಜಿಲ್ಲೆ ಉಪ ಆರೋಗ್ಯ ಶಿಕ್ಷಣಾಧಿಕಾರಿ  ಆರ್ ಎಂ ಹಂಚಿನಾಳ ಮಾತನಾಡಿ,   ಜನಸಂಖ್ಯೆ ವಿಪರೀತವಾಗಿ ಬೆಳೆಯುವುದರಿಂದ ಹಲವಾರು ಸಮಸ್ಯೆಗಳು ಆಗುತ್ತವೆ ಮುಂದಿನ ಪೀಳಿಗೆ  ಸುರಳಿತ ಜೀವನ ನಡೆಸಲಿಕ್ಕೆ ಜನಸಂಖ್ಯೆ ನಿಯಂತ್ರಣ ತುಂಬಾ ಅವಶ್ಯಕವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ,ಶಾಶ್ವತ ವಿಧಾನ  ಪುರುಷ ಸಂತಾನಹರಣ ಶಸ್ತ್ರಚಿಕಿತ್ಸೆ. ತಾತ್ಕಾಲಿಕ ವಿಧಾನ  ಗರ್ಭನಿರೋಧಕಗಳು ಇವೆ. ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ಅಧಿಕಾರಿ   ಡಾಕ್ಟರ್ ಜೈಬುನ್ನಿಸಾ ಬಿಳಗಿ , ಕ್ಯಾರೆಟ್ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ  ಡಾಕ್ಟರ್ ಈರಣ್ಣ ಧಾರವಾಡಕರ್,  ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ರಾಜೇಶ್ವರಿ ಗೋಲಗೇರಿ,  ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾಕ್ಟರ್ ಜಿಎಂ ಕೋಲೂರ್,  ಹಾಗೂ  ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಆರಂಭಂ ಚನಾಳ ಸೇರಿದಂತೆ ಇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply