ಹಂಪಿಯಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

0

ವಿಜಯನಗರ – ಮನರೇಗಾ ಆಯುಕ್ತರು ಹಾಗೂ ವಿಜಯನಗರ ಜಿಲ್ಲೆಯ ವಿಶೇಷಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ಹೊಸಪೇಟೆ ತಾಲೂಕಿನ ಹಂಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆಬದಿ ಸಸಿ ನೆಡುವ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿದರು.

ಹಂಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ ವತಿಯಿಂದ ರಸ್ತೆಬದಿಯಲ್ಲಿ ಐದುನೂರು ಸಸಿಗಳನ್ನು ನೆಡುವ ಯೋಜನೆಯನ್ನು ರೂಪಿಸಲಾಗಿರುತ್ತದೆ. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹನುಮಂತಪ್ಪ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿಶ್ವನಾಥ್ ಹೆಚ್,ನರೇಗಾ ಸಹಾಯಕ ನಿರ್ದೇಶಕರಾದ ಉಮೇಶ್ ಎಂ, ಆರ್ಎಫ್ಓ ವಿನಯ್ ಕೆಸಿ, ಪಿಡಿಒ ರಾಜೇಶ್ವರಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply