ವಿಸ್ಟಾಡೋಮ್ ಬೋಗಿಗಳ ರೈಲಿಗೆ ಚಾಲನೆ

0

ಮಂಗಳೂರು  – ಯಶವಂತಪುರ-ಮಂಗಳೂರು ಜಂಕ್ಷನ್ ಮಧ್ಯೆ ಹಗಲು ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ  ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿ ಮಂಗಳೂರು ಹಾಗೂ ಬೆಂಗಳೂರು ರೈಲಿಗೆ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿಆರ್ ಎಂ ಕೊಠಾರಿ, ಕಾರ್ಪೋರೆಟ್ ಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಸ್ಟಾಡೋಮ ಬೋಗಿಯಲ್ಲಿ 44 ಮಂದಿ ಪ್ರಯಾಣಿಸಬಹುದಾಗಿದೆ. ಎರಡು ಬೋಗಿಯಲ್ಲಿ 88 ಮಂದಿ ಪ್ರಯಾಣಿಸಬಹುದಾಗಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ ರೈಲು ಪ್ರಯಾಣಿಕರಿಗೆ ಪ್ರಕೃತಿಯ ರಮಣೀಯ ಸೌಂದರ್ಯವನ್ನು ಕಣ್ತುಂಬಿಸುವ ಅವಕಾಶ ಸಿಗಲಿವೆ.

ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗದಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಕೋಚ್‌ಗಳನ್ನು ಜೋಡಿಸಲಾಗಿದೆ. ಬೆಂಗಳೂರು-ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರು ಪ್ರಕೃತಿಯ ಸೊಬಗಿನ ದರ್ಶನವನ್ನು ಪಡೆಯಲಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply