ಪೆಟ್ರೋಲ್ ಬೆಲೆ ಹೆಚ್ಚಳ ಖಂಡಿಸಿ ಡಿವೈಎಫ್ಐ ನಿಂದ ಪ್ರತಿಭಟನೆ

0

ಹಾವೇರಿ – ಕೋವಿಡ್ ಸೋಂಕಿನಿಂದ ಜನತೆ ಬದುಕು ನಡೆಸುವುದೇ ದುಸ್ತರವಾಗಿರುವ ಸಂದರ್ಭದಲ್ಲಿ ತೈಲಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಜನ ಸಾಮನ್ಯರನ್ನು ಸಂಕಷ್ಟಕ್ಕೆ ದೂಡಿದೆ. ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳದೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನತೆಗೆ ದ್ರೋಹ ಎಸಗುತ್ತಿವೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಬಸ್ ನಿಲ್ದಾಣದ ಎದುರು ಮಂಗಳವಾರ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಸಂಘಟನೆಯ ಕಾರ್ಯಕರ್ತರು ಹಮ್ಮಿಕೊಂಡ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಳವನ್ನು ಖಂಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಳೆದ ಆರು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಡಿಸೇಲ್ ದರಗಳು ತೀವ್ರಗತಿಯಲ್ಲಿ ಏರುತ್ತಿರುವ ಪರಿಣಾಮವಾಗಿ ಸಾಮಾನ್ಯ ಜನತೆ ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಅಲ್ಲದೇ ಈ ತೈಲ ಬೆಲೆ ಏರಿಕೆಯ ಪರಿಣಾಮ ಇತರ ವಸ್ತುಗಳ ದರಗಳೂ ಕೂಡ ಹೆಚ್ಚುತ್ತಿರುವುದು ಜನ ಸಾಮನ್ಯರ ಬದುಕಿನ ಮೇಲ ಗಾಯದ ಮೇಲ ಬರೆ ಎಳೆದಂತಾಗಿದೆ ಎಂದರು.

ಡಿವೈಎಫ್ಐ ಮುಖಂಡ ಚಂದ್ರು ಬಿದರಗಡ್ಡಿ ಮಾತಾನಾಡಿ, ಅಚ್ಛೇದಿನ್ ಹೆಸರಲ್ಲಿ ಅಧಿಕಾರಕ್ಕೆ ಬಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ತೈಲ ಬೆಲೆ ಇಳಿಸಲು ಕೂಡಲೇ ಕ್ರಮ ಕೈಕೊಳ್ಳಬೇಕು. ಇಲ್ಲವಾದಲ್ಲಿ ಸರಕಾರಗಳ ವಿರುದ್ಧ ತೀವ್ರ ಹೋರಾಟಕ್ಕೆ ಜನತೆ ಮುಂದಾಗಬೆಕಾಗುತ್ತದೆ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸಚಿನ ಸೂರಣಗಿ, ನಾರಾಯಣ ಬಡಿಗೇರ, ಬಸವರಾಜ ಸಂದೀಮನಿ, ಸಚಿನ ಗೊಲ್ಲರ, ಮಹೇಶ ಬಾಗಪ್ಪನವರ, ಚಂದ್ರು ಪರಸಪ್ಪನವರ, ನಾಗರಾಜ ಮೆಕ್ಕಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. ತೈಲ ಬೆಲೆ ಹೆಚ್ಚಳ ಖಂಡಿಸಿ ಭಿತ್ತಿ ಪ್ರದರ್ಶನ ನಡೆಸಿ,ಸರಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

IMG_20210615_152635.jpg

Email

Basavaraj Pujar

About Author

Basavaraj Pujar

Leave A Reply