ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಭೂಮಿಪೂಜೆ

0

ಮಂಗಳೂರು

ಮಂಗಳೂರು ಮಹಾನಗರ ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಶಕ್ತಿನಗರ ಕುಂಟಲ್ಪಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಶಕ್ತಿನಗರ ಪ್ರಮುಖ ರಸ್ತೆಯಿಂದ ಕುಂಟಲ್ಪಾಡಿ ಸಂಪರ್ಕಿಲುವ ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. 182 ಮೀಟರ್ ಉದ್ದ ಹಾಗೂ 7 ಮೀಟರ್ ಅಗಲದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ರಸ್ತೆಯ 2 ಕಡೆಗಳಲ್ಲಿ ಮೋರಿ ನಿರ್ಮಾಣ ಮಾಡಲಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ರಸ್ತೆ ನಿರ್ಮಾಣದ ಸಂದರ್ಭದಲ್ಲಿ 1 ಭಾಗದ ರಸ್ತೆ ಕಾಮಗಾರಿ ಪ್ರಾರಂಭಿಸಿ ಇನ್ನೊಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ಅತೀ ಶೀಘ್ರದಲ್ಲೇ ಈ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply