ಮಕ್ಕಳನ್ನು ದುಡಿಮೆಯಿಂದ ಬಿಡಿಸಿ, ಶಿಕ್ಷಣ ಕೊಡಿಸಿ

0

ಬಳ್ಳಾರಿ ಕೊಟ್ಟೂರು: ಇಲ್ಲಿನ ತಾಲೂಕು ಕಛೇರಿಯಲ್ಲಿ ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನವನ್ನು ಶನಿವಾರ ಆಚರಿಸಲಾಯಿತು.
ತಹಶೀಲ್ದಾರ್ ಜಿ.ಅನಿಲ್ ಕುಮಾರ್ ಮಾತನಾಡಿ,5 ರಿಂದ 18 ವರ್ಷದೊಳಗಿನ ಮಕ್ಕಳನ್ನು ದುಡಿಮೆ ಕಳುಹಿಸದೆ ಅವರಿಗೆ ಉತ್ತಮ ಶಿಕ್ಷಣ ಕೊಡೊಸಬೇಕಿದೆ,
ತಮ್ಮ ಕುಡಿತದ ಚಟಕ್ಕೆ ಮಾಡಿದ ಸಾಲವನ್ನು ತೀರಿಸಲಾಗದೇ ಅಥವಾ ತಮ್ಮ ಕುಟುಂಬ ಜೀವನ ನಿರ್ವಹಣೆಗೆ ಮಾಡಿದ ಸಾಲವನ್ನು ತೀರಿಸಲಾಗದೇ ಮಕ್ಕಳನ್ನು ದುಡಿಮೆ ಹಚ್ಚುವುದು ವಿಪರ್ಯಸದ ಸಂಗತಿ ಎಂದರು.
5 ರಿಂದ 18 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ಮಕ್ಕಳು ಶಿಕ್ಷಣ ವಂಚಿತರಾಗಿ ಪೋಷಕರ ಬಲವಂತದಿಂದ ಕಾರ್ಮಿಕರಾಗುವುದನ್ನು ತಪ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಈ ರೀತಿಯಾಗಿ ಯಾರಾದರೂ ಬಾಲಕಾರ್ಮಿಕರು ಕಂಡುಬಂದಲ್ಲಿ ಕೂಡಲೇ ವರದಿ ಸಲ್ಲಿಸಿದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜತೆಗೆ ಪೋಷಕರಿಗೆ ತಿಳುವಳಿಕೆ ನೀಡಿ ಆ ಮಗುವಿಗೆ ಶಿಕ್ಷಣ ಕೊಡಿಸಲು ಬೇಕಾದ ಅಗತ್ಯಕ್ರಮಕೈಗೊಳ್ಳಲಾಗುವುದು ಎಂದರು
ಕರ್ನಾಟಕವನ್ನು ಬಾಲಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ಪ್ರಯತ್ನಿಸುತ್ತೇನೆಂದು ಎಂದು ಹಾಜರಿದ್ದ ಸಿಬ್ಬಂದಿಯವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಮಯದಲ್ಲಿ ಶಿರಸ್ತೇದಾರರಾದ ಶ್ರೀಮತಿ ಲೀಲಾ.ಎಸ್, ಕಂದಾಯ ನಿರೀಕ್ಷಕರ ಹಾಲಸ್ವಾಮಿ, ಸಿಬ್ಬಂದಿಯಾದ ಸಿ.ಮ.ಗುರುಬಸವರಾಜ, ರವಿ ಹರಪನಹಳ್ಳಿ, ಸುನಿತಾ ಯು ಎಂ , ಸುಧಾ ಜೈನರ್, ಮಲ್ಲೇಶ್ ಕೆ ಇದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

IMG-20210612-WA0045.jpg

Email

Huligesh Tegginakeri

About Author

Huligesh Tegginakeri

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಕಳೆದ ಎಂಟು ವರ್ಷಗಳ ಕಾಲ ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದೇನೆ.. ವಿಶೇಷ, ವಿಭಿನ್ನ ರೀತಿಯ ಸುದ್ದಿಗಳನ್ನು ಕಲೆಹಾಕಿ ಬರೆಯುವುದೇ ನನ್ನ ಹವ್ಯಾಸ..

Leave A Reply