ಪರೀಕ್ಷಾ ಕೇಂದ್ರಗಳ ಸುತ್ತಲೂ ಕಲಂ 144 ಮೇರೆಗೆ ಜಾರಿ

0

ಹುಬ್ಬಳ್ಳಿ  -ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜು.19  ಮತ್ತು 22  ರಂದು ಪ್ರತಿದಿನ ಬೆಳಿಗ್ಗೆ 10:30 ರಿಂದ 1:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 5:00 ಗಂಟೆಯವರೆಗೆ ಹುಬ್ಬಳ್ಳಿ – ಧಾರವಾಡ ಅವಳಿ ನಗರಗಳ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಎರಡು ಅಧಿವೇಶನಗಳಲ್ಲಿ ನಡೆಸಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಕಲಂ 144 ಮೇರೆಗೆ 200 ಮೀಟರ್ ಪ್ರದೇಶ ನಿಷೇಧಿಸಿ  ನಿಷೇಧಾಜ್ಞೆ ಹೊರಡಿಸಿ ಹು-ಧಾ ಪೊಲೀಸ್ ಕಮಿಷನರ್ ಲಾಭೂರಾಮ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮತ್ತು ಯಾವುದೇ ಅಹಿತಕರ ಚಟುವಟಿಕೆಗಳು ಹಾಗೂ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸಮೀಪದ ಸ್ಕ್ಯಾನಿಂಗ್ , ಝರಾಕ್ಸ್ ಮತ್ತು ಕಂಪ್ಯೂಟರ್ ಸೆಂಟರ್‌ಗಳನ್ನು ಪರೀಕ್ಷೆಯ ಸಮಯದಲ್ಲಿ ಕಾರ್ಯ ನಿರ್ವಹಿಸದಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಸಭೆ ಅಥವಾ  ಸಮಾರಂಭಗಳು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ಉಪಯೋಗಿಸುವುದನ್ನು ನಿರ್ಭಂಧಿಸಲಾಗಿದೆ ಎಂದು ಆದೇಶಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply