ವಿಜಯನಗರ-  ವಿಜಯನಗರ ಜಿಲ್ಲೆಗಳಲ್ಲಿರುವ 6 ತಾಲೂಕುಗಳಲ್ಲಿ ಸರಕಾರಿ ಸಂಬಂಧಿಸಿದ ಯಾವುದೇ ರೀತಿಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಸಂದರ್ಭದಲ್ಲಿ ಹಾಗೂ ಸರಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ವಿಜಯನಗರ ಜಿಲ್ಲೆ ಅಂತ ಹೆಸರನ್ನು ನಮೂದಿಸಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಮತ್ತು ವಿಜಯನಗರ ಜಿಲ್ಲೆ ವಿಶೇಷಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ಹೇಳಿದರು. ವಿಜಯನಗರ ಜಿಲ್ಲೆ ಅಂತ ಹೆಸರನ್ನು ಕಡ್ಡಾಯವಾಗಿ ನಮೂದಿಸಬೇಕು, ಇಲ್ಲದಿದ್ದರೇ ಆ ಭಾಗದ ಜನರು ಈಗಾಗಲೇ ಜಿಲ್ಲೆ ಅಂತ ಘೋಷಣೆಯಾಗಿದೆ, ಆದರೂ ಸಹ ಅಧಿಕಾರಿಗಳು ವಿಜಯನಗರ ಜಿಲ್ಲೆ ಹೆಸರು ನಮೂದಿಸುತ್ತಿಲ್ಲ ಅಂತ ಅಂದುಕೊಳ್ಳುತ್ತಾರೆ ಎಂದರು.

ಈಗಾಗಲೇ ಫೆ.8ರಿಂದ ವಿಜಯನಗರ ಜಿಲ್ಲೆಗೂ ಬಳ್ಳಾರಿ ಜಿಲ್ಲಾಧಿಕಾರಿಗಳೇ ಪ್ರಭಾರಿ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುವುದಕ್ಕೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಅದರಂತೆ ಎಲ್ಲರೂ ಕಾರ್ಯನಿರ್ವಹಿಸಬೇಕು. ಆ ಭಾಗದ ಸರಕಾರಿ ಕಡತಗಳಲ್ಲಿಯೂ ಕಡ್ಡಾಯವಾಗಿ ವಿಜಯನಗರ ಜಿಲ್ಲೆ ಅಂತ ನಮೂದು ಮಾಡಬೇಕು ಎಂದು ಸೂಚಿಸಿದರು..

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply