ಮಂಗಳೂರು  – ಕೊರೋನಾ ಎರಡನೇ ಅಲೆಯಿಂದ ಸಂಕಷ್ಟ ಎದುರಿಸುತ್ತಿರುವ ಮುಂಚೂಣಿ ಕಾರ್ಯಕರ್ತರಿಗೆ ಮಂಗಳೂರು ದಕ್ಷಿಣ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್  ರಾಜ್ ರೈ ಅವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ಗಳ ವಿತರಣಾ ಕಾರ್ಯಕ್ರಮ ಮಂಗಳೂರು ನಗರದ ಗಾಂಧಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಕೋವಿಡ್ ವಾರಿಯರ್‌ ಗಳಾದ ಅಂಗನವಾಡಿ ಕಾರ್ಯಕರ್ತೆಯರು, ಅನುದಾನ ರಹಿತ ಶಾಲಾ ಶಿಕ್ಷಕಿಯರು, ದಾದಿಯರು ಮತ್ತು ಕೋವಿಡ್ ಸಂದರ್ಭ ದಲ್ಲಿ ಶವ ಸಂಸ್ಕಾರ ನಡೆಸುತ್ತಿರುವ ಬಜರಂಗದಳದ ಸ್ವಯಂ ಸೇವಕರು ಸೇರಿದಂತೆ ೨೫೦ಕ್ಕೂ ಅಧಿಕ ಮಂದಿಗೆ   ಮಂಗಳೂರಿನ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಸೇರಿದಂತೆ ನಾಲ್ಕು ಕಡೆಗಳಲ್ಲಿ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ಮಂಗಳೂರಿನ ಶಾರದೋತ್ಸವ ಸಮಿತಿ ಕಟ್ಟಡ, ಕದ್ರಿ ವಿಶ್ವಹಿಂದೂ ಪರಿಷತ್‌ ನ‌ ವಿಶ್ವಶ್ರೀ ಕಟ್ಟಡ, ಶಕ್ತಿನಗರದ ಆರೋಗ್ಯ ಕೇಂದ್ರದಲ್ಲಿ ಕಿಟ್ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ  ಸುದರ್ಶ ನ್ ಮೂಡಬಿದಿರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರ ಸೂಚನೆಯ ಮೆರೆಗೆ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸಮಾಜದ ದುರ್ಬಲರಿಗೆ, ಮುಂಚೂಣಿ ಕಾರ್ಯಕರ್ತರಿಗೆ ನೆರವಾಗಲು ನೀಡಿರುವ ಕರೆಯಂತೆ ಜಿಲ್ಲೆ ಯಾದ್ಯಂತ ಇಂತಹ ಚಟುವಟಿಕೆಗಳನ್ನು ನಡೆಸುತ್ತಿರುವ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿನ್ ರಾಜ್ ರೈ ಮತ್ತು  ಅವರ ಕುಟುಂಬದ ಸದಸ್ಯರು ದಿನಸಿ ಸಾಮಾಗ್ರಿಗಳ ಕಿಟ್ ಗಳನ್ನು ಕೊಡುಗೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply