ಬೆಂಗಳೂರು –  ಮಾಜಿ ಶಾಸಕ ಅನೀಲ್ ಲಾಡ್ ಕಾರು ಅಪಘಾತವಾಗಿದ್ದು, ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ ಸ್ನೇಹಿತರ ಮನೆಗೆ ಊಟಕ್ಕೆ ಹೋಗಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದ್ದು ಅನೀಲ್‌ ಲಾಡ್ ಅವರಿಗೆ ಕೈ ಮತ್ತು ಕಾಲಿಗೆ ಗಂಭೀರವಾದ ಗಾಯಗಳಾಗಿವೆ. ಬೆಂಗಳೂರಿನ ಸಂಜಯ ನಗರದಲ್ಲಿ ಈ ಘಟನೆ ನಡೆದಿದೆ. ಸ್ನೇಹಿತರ ಮನೆಗೆ ಹೋಗಿ ವಾಪಸ್ ಬರುವಾಗ , ರಸ್ತೆಯಲ್ಲಿ ಅಡ್ಡ ಬಂದ ನಾಯಿ  ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ  ಅನೀಲ್ ಲಾಡ್ ಹಾಗೂ ಪತ್ನಿ ಮಾತ್ರ  ಪ್ರಯಾಣಿಸುತಿದ್ದರು. ಇನ್ನು ರೇಂಜ್ ರೋವರ್ ಕಾರ್ ಅಪಘಾತವಾಗಿದ್ದು ಸಂಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ‌ ಅನೀಲ್ ಲಾಡ್ ಅವರಿಗೆ ಕೈ ಮತ್ತು ಕಾಲುಗಳಿಗೆ ಪೆಟ್ಟು ಹಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ರಮ ಆಸ್ಪತ್ರೆಗೆ ಸೇರಿಸಲಾಗಿದ್ದು.‌ ಅನೀಲ್ ಲಾಡ್ ಅವರಿಗೆ  ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ…

About Author

Priya Bot

Leave A Reply