ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆ.

0

ಬೆಂಗಳೂರು

ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿದ್ದು. ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಮಲೆನಾಡು ಸೇರಿದಂತೆ ಕರವಾಳಿ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುತಿದ್ದು‌ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು, ಬುಧವಾರವೂ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಜೂ.18ರವರೆಗೆ ಮಳೆ ಭಾರಿ ಬೀಳುವ ಸಾಧ್ಯತೆಯಿದ್ದು, ಜೂ.16ರಂದು ಬೆಳಗ್ಗೆಯಿಂದ 17ರಂದು ಬೆಳಗ್ಗೆವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲ ಪ್ರದೇಶಗಳಲ್ಲಿ ಕಳೆದ ಐದಾರು ದಿನಗಳಿಂದ ವ್ಯಾಪಕ ಮಳೆಯಾಗಿದ್ದು, ಜಿಲ್ಲೆಯ ಜೀವ ನದಿಗಳಾದ  ನೇತ್ರಾವತಿ, ಕುಮಾರಧಾರ ಸಹಿತ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿವೆ. ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಧರ್ಮಸ್ಥಳದ ನೇತ್ರಾವತಿ ಹಾಗೂ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದಲ್ಲಿ ಭಕ್ತರು ಸ್ನಾನಕ್ಕೆ ತೆರಳದಂತೆ ಎಚ್ಚರಿಕೆ ವಹಿಸಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply