ಕೊಡಗು – ಕೊಡಗು ಜಿಲ್ಲೆಯ ದಟ್ಟ ಅರಣ್ಯಕ್ಕೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ದುಬಾರೆ ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಬೇಕಿ ಕೆಣ್ಣಾಲಿಗೆ ಸುಮಾರು  ಹನ್ನೆರಡು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

ಈ ಹಿನ್ನೆಲೆಯಲ್ಲಿ ಐವತ್ತುಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಅಗ್ನಿಶಾಮಕ ದಳ ಹಾಗೂ ಸ್ಥಳೀಯ ನಿವಾಸಿಗಳ ಸಹಕಾರದಿಂದ ಬೆಂಕಿ ನಂದಿಸಲಾಗಿದೆ. ಬೆಂಕಿಯ ಕೆನ್ನಾಲಿಗೆ ಸಣ್ಣಪುಟ್ಟ ಕಾಡು ಪ್ರಾಣಿಗಳು ಹಾವುಗಳು ಬೆಂಕಿಗಾಹುತಿಯಾಗಿದೆ .ಅರಣ್ಯ ಇಲಾಖೆಯ ಸಮಯಪ್ರಜ್ಞೆಯಿಂದ ವ್ಯಾಪಕವಾಗಿ ಹರಡುವ ಸಾಧ್ಯತೆ ಇತ್ತು ಈ ನಿಟ್ಟಿನಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply