ಮೊದಲು ನಿರ್ಮಲಾ ಸೀತಾರಾಮನ್ ಅವರನ್ಜು ಕಿತ್ತುಹಾಕಬೇಕು….

0

ಬೆಂಗಳೂರು –  ಕೇಂದ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆಗಿದ್ದೆ ತಡ ಮಾಜಿ ಸಿ ಎಮ್ ಸಿದ್ದರಾಮಯ್ಯಾ ಅವರು ಸರಣಿ ಟ್ವೀಟ್ ಮಾಡುವ ಮೂಲಕ ಸಚಿವ ಸಂಪುಟ ಹಾಗೂ ಮೋದಿ ವಿರುದ್ಧದ ವಾಗ್ದಾಳಿ ಮುಂದು ವರೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರಕಾರದ ವಿರುದ್ಧ ತಮ್ಮದೇ ದಾಟಿಯಲ್ಲಿ ಚಾಟಿ ಬೀಸಿದ್ದಾರೆ.

ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಆಗಿರುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್ ಬ್ಯಾನ್, GST, ಕೊರೊನಾ ಪರಿಹಾರ ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ದುಸ್ಥಿತಿಗೆ ಬಂದಿದೆ.

ಆಗಾಗ ಟಿವಿಗಳಲ್ಲಿ ಕಾಣಿಸಿಕೊಂಡು ಜಾಗಟೆ ಬಡಿದು, ದೀಪ ಹಚ್ಚಿ ಕೊರೊನಾ ವೈರಸ್ ಓಡಿಸಲು ಹೇಳಿದ ಮತ್ತು ಆರೋಗ್ಯ ಸಚಿವರನ್ನು ಬದಿಗೊತ್ತಿ ಎಲ್ಲ ನಿರ್ಧಾರಗಳನ್ನು ಕೈಗೊಂಡವರು ನರೇಂದ್ರ ಮೋದಿ ಈಗ ಕೊರೊನಾ ನಿಯಂತ್ರಣದ ವೈಫಲ್ಯಕ್ಕೆ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕಲ್ಲಾ? ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಸರ್ಕಾರದಲ್ಲಿ ಸಂಪುಟ ವಿಸ್ತರಣೆಗೆ ಯಾವ ಮಹತ್ವ ಇಲ್ಲ. ಯಾರು ಸಚಿವರಾದರೂ ಅವರೆಲ್ಲರೂ ನಾಮ್ ಕಾವಸ್ತೆ, ಹಣಕಾಸು, ಆರೋಗ್ಯ, ಶಿಕ್ಷಣ ಖಾತೆ ಯಾವುದೇ ಇರಲಿ, ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ನರೇಂದ್ರ ಮೋದಿ  ಅವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ.

ಸಚಿವರ ಕಾರ್ಯನಿರ್ವಹಣೆಯೇ ಸಂಪುಟ ಪುನಾರಚನೆಯ ಮಾನದಂಡವಾಗಿದ್ದರೆ ಮೊದಲು ನರೇಂದ್ರ ಮೋದಿ  ಅವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್ ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದ ವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ಸರ್ಕಾರ ಹೊಣೆ ನರೇಂದ್ರ ಮೋದಿಯವರು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply