ಮುಂದಿನ ಎರಡು ವರ್ಷ ನಾನೇ ಸಿ ಎಮ್

0

ಹಾಸನ -ಕಳೆದ ಒಂದು ವಾರದಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚ್‌ಗೆ ಗ್ರಾಸವಾಗಿದೆ‌. ಈ ಮಧ್ಯ ಇದಕ್ಕೆ ಸಿ ಎಮ್ ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ರಾಜ್ಯದಲ್ಲಿ ನಾನೇ ಸಿ ಎಮ್ ಎಂದಿದ್ದಾರೆ. ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ರಾಜ್ಯದ ಅಭಿವೃದ್ಧಿಗೆ ಗಮನ ಕೊಡುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹಾಸನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದಿದ್ದಾರೆ. ಎಲ್ಲರ ಸಹಕಾರದಿಂದ ರಾಜ್ಯದ ಮುಂದಿನ ಅಭಿವೃದ್ಧಿಯತ್ತ ಗಮನ ಕೊಡುವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply