ಮಾಜಿ ಬಿಜೆಪಿ ಶಾಸಕ  ಎಚ್. ಡಿ.ಬಸವರಾಜು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

0

ಬೆಂಗಳೂರು – ಆಮ್‌ ಆದ್ಮಿ ಪಾರ್ಟಿಯ ತತ್ತ್ವ ಸಿದ್ಧಾಂತಗಳು ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಜನಪರ ಆಡಳಿತವನ್ನು ಮೆಚ್ಚಿ, ಹಾಗೂ ಸ್ವಪಕ್ಷ ಬಿಜೆಪಿಯಲ್ಲಿನ ಭ್ರಷ್ಟಾಚಾರ, ಆಂತರಿಕ  ಕಿತ್ತಾಟದಿಂದ ಬೇಸತ್ತು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಚ್‌.ಡಿ.ಬಸವರಾಜುರವರು ಇಂದು ಎಎಪಿಯನ್ನು ಸೇರಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯು ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದ ಅನೇಕರು ಎಎಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ.

ಎಚ್‌.ಡಿ.ಬಸವರಾಜುರವರು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆಯ ಶಾಸಕರಾಗಿ ಉತ್ತಮ ಕೆಲಸಗಳನ್ನು ಮಾಡಿದ ಅನುಭವ ಹೊಂದಿದ್ದಾರೆ. 2005ರಿಂದ 2007ರವರೆಗೆ ಕರ್ನಾಟಕ ಸರ್ಕಾರ ಭರವಸೆಗಳ ಸಮಿತಿಯ ಅಧ್ಯಕ್ಷರಾಗಿ, 2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಶ್ರೀ ಜಯದೇವ ಇನ್ಸ್‌ಟಿಟ್ಯೂಟ್‌ ಆಫ್‌ ಕಾರ್ಡಿಯೋವಸ್ಕುಲಾರ್‌ ಸೈನ್ಸಸ್‌ ಅ್ಯಂಡ್‌ ರಿಸರ್ಚ್‌ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿ ಹಾಗೂ ಚಿಕ್ಕಮಗಳೂರು – ಕೊಡಗು ಗ್ರಾಮೀಣ ಬ್ಯಾಂಕಿನ ನಿರ್ದೇಶಕರಾಗಿ ಕೂಡ ಶ್ರೀಯುತರು ಸೇವೆ ಸಲ್ಲಿಸಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply