ಆರ್ಥಿಕ ಸಂಕಷ್ಟ ಪ್ರಾಣ ಕಳೆದುಕೊಂಡ ಒಂದೇ ಕುಟುಂಬದ ನಾಲ್ವರು

0

ಚಾಮರಾಜನಗರ  – ಕರೋನಾ ಸಂಕಷ್ಟದಿಂದ ದೇಶದ ಆರ್ಥಿಕ ಸ್ಥಿತಿ ಅದೋ ಗತಿಗೆ ಬಂದು ತಲುಪಿದೆ. ಈ ಮಧ್ಯೆ ಬಹುತೇಕ ಮಧ್ಯಮ ಕುಟುಂಬದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಕರೋನಾ ಸಂಕಷ್ಟದ ಕಾಲದಲ್ಲಿ ಚಾಮರಾಜನಗರ ಜಿಲ್ಲೆಯ ಹೆಚ್ ಮುಖಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಮಹದೇವಪ್ಪ 47 ವರ್ಷ, ಅವರ ಪತ್ನಿ ಮಂಗಳಮ್ಮ 40 ವರ್ಷ , ಅವರ ಮಕ್ಕಳಾದ ಜ್ಯೋತಿ 14 ವರ್ಷ, ಶ್ರುತಿ (12 ವರ್ಷ) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಪ್ಪ ಒಂದೂವರೆ ಎಕರೆ ಮಳೆ ಆಶ್ರಿತ ಜಮೀನು ಹೊಂದಿದ್ದು, ಕೂಲಿ ಕಾರ್ಮಿಕರಾಗಿದ್ದರು. ಆತ್ಮಹತ್ಯೆ ಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಡು ಬಡತನ, ಸಾಲಬಾಧೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply