ತುಮಕೂರು- ಕ್ಷುಲ್ಲಕ ಕಾರಣಕ್ಕಾಗಿ 17 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತುಮಕೂರಿನ ಆದರ್ಶ ನಗರದ ಚಿದಾನಂದ ಲೇಔಟ್ ನಲ್ಲಿ ನಡೆದಿದೆ. ಲಿಖಿತ್ ಗೌಡ(17) ಕೊಲೆಯಾದ ಬಾಲಕ ಎಂದು ಗುರುತಿಸಲಾಗಿದ್ದು. ಬಾಲಕನನ್ನು ಆತನ ಸ್ನೇಹಿತರೇ ಕರೆಯಿಸಿಕೊಂಡು ಜಗಳ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ರವಿವಾರ ಬೆಳಗಿನ ಜಾವ ಆಟವಾಡುವ ಸಮಯದಲ್ಲಿ ಸ್ನೇಹಿತರ ಮಧ್ಯೆ ಗಲಾಟೆ ಆರಂಭವಾಗಿದೆ. ಇದೇ ಗಲಾಟೆ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಸ್ನೇಹಿತರೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಅನುಮಾನ ಪೊಲೀಸರು ವ್ಯಕ್ತಪಡಿದ್ದಾರೆ.
ತುಮಕೂರು ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ