ಷರತ್ತಿಗೊಳಪಟ್ಟು ಇಂದಿನಿಂದ ಮಂಗಳೂರಿನಿಂದ ಕಾಸರಗೋಡು ಬಸ್ ಸಂಚಾರ ಆರಂಭ

0

ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದೆ. ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಸೋಮವಾರದಿಂದ ಈ ಕೆಳಕಂಡ ಪರತ್ತಿಗೊಳಪಟ್ಟು ಅನುಮತಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1 ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ ನಿರ್ವಾಹಕರು  ಖಚಿತಪಡಿಸಕೊಳ್ಳತಕ್ಕದ್ದು.

ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ) ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು  ಎಂದು   ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರೋ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply