ಹುಬ್ಬಳ್ಳಿ-   ಪುಣಾ-ಬೆಂಗಳೂರ ಬೈಪಾಸ್ ರಸ್ತೆಯು ಕಿರಿದಾಗಿದ್ದು, ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಈ ರಸ್ತೆಯನ್ನು  ಮೇಲ್ದರ್ಜೆಗೆ ಏರಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗಬ್ಬೂರು ಬೈಪಾಸ್ ಗೆ ಮುತ್ತಿಗರ ಹಾಕಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರು ಹೆದ್ದಾರಿ ಪ್ರತಿಭಟನೆ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.  ಆಗ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹು-ಧಾ ಪೊಲೀಸ್ ಕಮೀಷನರ್ ಲಾಬೂರಾಮ್ ಪ್ರತಿಭಟನೆ ಕೈ ಬಿಡುವಂತೆ ಹೇಳಿದರು. ಆಗಲೂ ಪ್ರತಿಭಟನೆ ನಿಲ್ಲಿಸದಿದ್ದಾಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನಚಕಮಕಿ ನಡೆಯಿತು.

ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಶರ್ಟ ಹಿಡಿದ್ದಾರೆಂದು ಪೊಲೀಸರು ಮತ್ತು ಕಾರ್ಯಕರ್ತರು ತಳ್ಳಾಟ ನೂಕಾಟ ನಡೆಯಿತು. ಇದರಿಂದ ಕೆಲಹೊತ್ತು ಟ್ರಾಪೀಕ್ ಜಾಮ್ ಉಂಟಾಗಿತ್ತು.  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಎಚ್ಚೆತ್ತುಕೊಂಡು ರಾಷ್ಟ್ರೀಯ ಹೆದ್ದಾರಿ 4ನ್ನು ವಿಸ್ತರಿಸಬೇಕು. ಇಲ್ಲದೇ ಹೋದಲ್ಲಿ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಇನ್ನೂ ಉಗ್ರಾವಾದ ಹೋರಾಟ ಮಾಡಲಾಗುವುದು ಎಂದು  ಕಾಂಗ್ರೆಸ್ ನಾಯಕರು ಎಚ್ಚರಿಸಿದರು.

About Author

Priya Bot

Leave A Reply