ಕಾರ್ಮಿಕರ ಸಂಕಷ್ಟಕ್ಕೆ ಸರ್ಕಾರದ ನೆರವು :ಶಾಸಕ ಸೋಮಶೇಖರ ರೆಡ್ಡಿ

0

ಬಳ್ಳಾರಿ

ಬಳ್ಳಾರಿ ನಗರದಲ್ಲಿರುವ  35 ಸಾವಿರ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಮೂರು ಹಂತದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 7 ಸಾವಿರ ಜನರಿಗೆ ಕಿಟ್ ವಿತರಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಹೇಳಿದರು.

ಕಾರ್ಮಿಕ ಇಲಾಖೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಡಳಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ ಕಾರ್ಮಿಕರ ಕಲ್ಯಾಣ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನಗರದ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ  ನಡೆದ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ  ಆಹಾರದ ಕಿಟ ವಿತರಣೆ ಮಾಡಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ನೆರವಾಗುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ. ಈಗಾಗಲೇ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ 3 ಸಾವಿರ ಸಹಾಯಧನ ನೀಡಿದ್ದು, ಮುಂದಿನ ದಿನಗಳಲ್ಲಿ ನಿಮ್ಮ ಜೊತೆಯಾಗಿ ಸರ್ಕಾರ ಇರಲಿದೆ ಎಂದು ತಿಳಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply