ಹೋಂ‌ಗಾರ್ಡ್ ಕುಟುಂಬಕ್ಕೆ ಸರ್ಕಾರದ ಸಹಾಯ ಹಸ್ತ

0

ಮಂಗಳೂರು  – ಕರ್ತವ್ಯದಲ್ಲಿರುವಾಗಲೇ ಅಪಘಾತದಲ್ಲಿ ಮೃತಪಟ್ಟ ಮೂಲ್ಕಿ ಪೊಲೀಸ್ ಠಾಣೆಯ ಹೋಂ‌ಗಾರ್ಡ್ ಕುಟುಂಬಕ್ಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಸಂಗ್ರಹವಾದ 5.26 ಲಕ್ಷ ರೂಪಾಯಿ ಮೊತ್ತವನ್ನು ಇಂದು ಹಸ್ತಾಂತರ‌ ಮಾಡಲಾಯಿತು.

ಜೂನ್ 30ರಂದು ಉಡುಪಿಯ ಅಜ್ಜರಕಾಡು ಬಳಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ರಾಕೇಶ್ ಅವರಿದ್ದ ವಾಹನ ಅಪಘಾತಕ್ಕೀಡಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮರುದಿನ ಆಸ್ಪತ್ರೆಯಲ್ಲಿ ಸಾವನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಘಟಕವಾರು ಪರಿಹಾರ ಮೊತ್ತ ಸಂಗ್ರಹಿಸಿ ಮೃತ ಹೋಮ್ಗಾರ್ಡ್ ರಾಜೇಶ್​​ ಕುಟುಂಬಸ್ಥರಿಗೆ ನೀಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಸಿಪಿ ನಟರಾಜ್ ಇನ್ನಿತರ ಪೊಲೀಸ್ ಅಧಿಕಾರಿಗಳು ಇಂದು ಅವರ ಮನೆಗೆ ಭೇಟಿ ನೀಡಿ ಪರಿಹಾರದ ಮೊತ್ತವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply