ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

0

ಮಂಗಳೂರು  – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 2020ರ ಫೆಬ್ರವರಿಯಿಂದ ನಿವೇಶನ ವಿನ್ಯಾಸ ಅನುಮೋದನೆಯ ಶುಲ್ಕದಲ್ಲಿ ಮಾಡಲಾಗಿದ್ದ ಭಾರೀ ಏರಿಕೆಯನ್ನು ಕಡಿತಗೊಳಿಸಿ ರಾಜ್ಯ ಸರಕಾರ ಆದೇಶಿಸಿದ್ದು, ಪ್ರಸಕ್ತ ಹೊಸ ಪರಿಷ್ಕೃತ ದರವನ್ನು ಅನ್ವಯಿಸಲಾಗುತ್ತಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ರವಿಶಂಕರ ಮಿಜಾರು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಏರಿಕೆಯಾಗಿದ್ದ ವಿನ್ಯಾಸ ಅನುಮೋದನೆ ದರ ಏರಿಕೆ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆಯನ್ನು ಮನಗಂಡು ಪ್ರಾಧಿಕಾರದಿಂದ ಆಗಸ್ಟ್‌ನಲ್ಲಿ ಪತ್ರ ಬರೆಯಲಾಗಿತ್ತು. ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರು ಚರ್ಚಿಸಿ ಇದೀಗ ಶುಲ್ಕವನ್ನು ಕಡಿತಗೊಳಿಸಿ ಆದೇಶಿಸಿದ್ದಾರೆ ಎಂದು ಅವರು ಹೇಳಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply