ಹಂತಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

0

ಮಂಗಳೂರು

ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂಕಣಿ ಅಕಾಡೆಮಿ ಅಧ್ಯಕ್ಷರೊಂದಿಗೆ ಭವನಗಳ ನಿರ್ಮಾಣ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ರಂಗಮಂದಿರ ಜೊತೆಗೆ ತುಳು, ಬ್ಯಾರಿ ಹಾಗೂ ಕೊಂಕಣಿ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಸರ್ಕಾರದಿಂದ  ಈಗಾಗಲೇ  ಅನುದಾನ ಬಿಡುಗಡೆಯಾಗಿದೆ.  ಆಯಾ ಅಕಾಡೆಮಿ  ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದವರು ಒಪ್ಪಿಗೆ ನೀಡಿದ್ದಾರೆ ಎಂದರು. ಜಿಲ್ಲಾ ರಂಗಮಂದಿರಕ್ಕೆ ಮೊದಲ ಹಂತದಲ್ಲಿ 5 ಕೋಟಿ, ತುಳು ಭವನದ ನಿರ್ಮಾಣಕ್ಕೆ ಎರಡನೇ ಹಂತದಲ್ಲಿ 3.5 ಕೋಟಿ, ಕೊಂಕಣಿ ಮತ್ತು ತುಳು ಅಕಾಡೆಮಿಯ ಭವನಕ್ಕಾಗಿ ಮೊದಲ ಹಂತದಲ್ಲಿ ತಲಾ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ಶಾಸಕ ಡಾ. ಭರತ್ ಶೆಟ್ಟಿ ವೇದಿಕೆಯಲ್ಲಿದ್ದರು. ಉಪವಿಭಾಗಾಧಿಕಾರಿ ಮದನ್ ಮೋಹನ್, ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಡಾ. ಜಗದೀಶ್ ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತಹಶೀಲ್ದಾರರು  ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply