ಬಿಳಿ ಬಾವುಟ ತೋರಿ ಕದನ ವಿರಾಮ ಘೋಷಣೆ ಮಾಡಿದ ಎಚ್ಡಿಕೆ…!

0

ಬೆಂಗಳೂರು  – ಮಾಜಿ ಸಿ ಎಮ್ ಎಚ್‌ಡಿ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ಮಧ್ಯದ ವಾಕ್ ಸಮರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.‌ ಕೆ ಆರ್ ಎಸ್ ಡ್ಯಾಂ ವಿಚಾರವಾಗ ಆರಂಭವಾದ ವಾಕ್ ಸಮರ ತೀರಾ ವಯಕ್ತಿಕ ವಿಚಾರಕ್ಕೆ ತಿರುಗಿತ್ತು, ಇಬ್ಬರು ನಾ ಒಂದು ತಾ ಒಂದು ಎನ್ನುವಂತೆ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದರು, ಆದ್ರೆ ಈಗ ಬಿಳಿ ಬಾವುಟ ತೋರಿಸಿ ಮಾಜಿ ಸಿ ಎಮ್ ಕುಮಾರಸ್ವಾಮಿ ಕದನ ವಿರಾಮ ಘೋಷಣೆ ಮಾಡಿದ್ದಾರೆ. ತಮ್ಮ ಟ್ವೀಟರ್ ಕಾಥೆಯಲ್ಲಿ ಈ ವಿಷಯವನ್ನು ಇಲ್ಲಿಗೆ ಬಿಟ್ಟು ನಿಡಿ ಎಂದು ತಮ್ಮ ಬೆಂಬಲಿಗರೂ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ,ಕನ್ನಡಿಗ,ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ.ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಬರೆದುಕೊಂಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply