ಬೆಂಗಳೂರು
ಬಹು ನೀರಿಕ್ಷಿತ ಕೇಂದ್ರ ಸರಕಾರದ ಬಜೆಟ್ ಮಂಡನೆಯಾಗಿದ್ದು ಬಿಜೆಇಗರು ಇದೊಂದು ಪ್ರಗತಿಪರ ಬಜೆಟ್ ಎಂದು ಹಾಡಿ ಹೊಗಿಳಿದ್ದಾರೆ. ಆದ್ರೆ ಈ ಬಜೆಟ್ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್ ಡಿ ಕೆ ಇದೊಂದು ಎಲ್ಲವನ್ನೂ ಏರಿಸಿರುವ ಕೇಂದ್ರ ತನ್ನದು ‘ಆತ್ಮನಿರ್ಭರ ಭಾರತ’ ರೂಪಿಸುವ ಬಜೆಟ್ ಎಂದು ವೆಂಗ್ಯವಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿ ಎಮ್ ಕುಮಾರಸ್ವಾಮಿ ಅವರು ದಿನ ಬಳಕೆ ವಸ್ತುಗಳನ್ನುಏರಿಸಿರುವ ಕೇಂದ್ರ ತನ್ನದು ‘ಆತ್ಮನಿರ್ಭರ ಭಾರತ’ ರೂಪಿಸುವ ಬಜೆಟ್ ಎಂದು ಟ್ವೀಟ್ ಮಾಡಿದ್ದಾರೆ.
ಇಷ್ಟು ಏರಿಕೆಗಳನ್ನು ಕಂಡ ಭಾರತವು ಆತ್ಮನಿರ್ಭರತೆಯನ್ನು ಸಾಧಿಸಲು ಸಾಧ್ಯವೇ? ಡೀಸೆಲ್, ಪೆಟ್ರೋಲ್ ಈಗಾಗಲೇ ಏರುತ್ತಿದೆ. ಅದರ ಜೊತೆಗೆ ಈಗಿನ ಭಾರಿ ಏರಿಕೆ ಪರಿಣಾಮ ಏನಾಗಲಿದೆ ಎಂದು ಕೇಂದ್ರ ಯೋಚಿಸಿದಂತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಜೆಟ್ ಟೀಕಿಸಿದ್ದಾರೆ.