ಬೆಂಗಳೂರು – ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ  ಎಚ್ ಎಸ್ ದೊರೆಸ್ವಾಮಿ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ನಾಡಿಗೆ ಎಚ್ಎಸ್ ದೊರೆಸ್ವಾಮಿ ಹಿರಿಯಣ್ಣನಂತೆ ಇದ್ದರು. ಅವರು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಪ್ರಮುಖರು. ತಮ್ಮ ಇಳಿವಯಸ್ಸಿನಲ್ಲಿಯೂ ತಮ್ಮ ಇಡೀ ಜೀವನವನ್ನು ಸಮಾಜಸೇವೆಗೆ ಅವರು ಮುಡಿಪಾಗಿಟ್ಟಿದ್ದರು.  ಅವರ ನಿಧನದಿಂದ ಕನ್ನಡ ನಾಡು ಬಡವಾಗಿದೆ  ಎಂದು ಅವರು ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ.  ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply