ಮಂಗಳೂರು  – ಕೊರೋನ ಎರಡನೇ ಅಲೆಯು ದೇಶದಲ್ಲಿ ಅಪಾರ ಸಾವು-ನೋವುಗಳಿಗೆ ಕಾರಣವಾಗಿದೆ. ಕೊರೋನ ನಿಯಂತ್ರಿಸಿ ಲಸಿಕೆ ಹಂಚಿ ಜನರಿಗೆ ಧೈರ್ಯ ನೀಡಬೇಕಾಗಿದ್ದ ಪ್ರಧಾನ ಮಂತ್ರಿಗಳು ಮೊಸಳೆ ಕಣ್ಣೇರು ಸುರಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಟೀಕಿಸಿದ್ದಾರೆ.

ಅವರು ರೈತರ ಹೋರಾಟಕ್ಕೆ 6 ತಿಂಗಳು ಮತ್ತು ರೈತ ವಿರೋಧಿ ಕೃಷಿ ಕಾನೂನು ವಾಪಾಸು ಪಡೆಯಲು ಮತ್ತು ಕೋವಿಡ್ ನಿಯಂತ್ರಿಸುವಲ್ಲಿ, ಜನರಿಗೆ ಪರಿಹಾರ ಕ್ರಮ ವಿತರಿಸುವಲ್ಲಿನ ವೈಫಲ್ಯದ ವಿರುದ್ದ  ರಾಷ್ಟ್ರ ವ್ಯಾಪಿ ಕರಾಳದಿನದ ಹೋರಾಟಕ್ಕೆ ಬೆಂಬಲಾರ್ಥವಾಗಿ ಡಿವೈಎಫ್ಐ, ಎಸ್ಎಫ್ಐ, ಜನವಾದಿ ಮಹಿಳಾ ಸಂಘಟನೆಗಳ ಕೇಂದ್ರ ಸಮಿತಿಗಳ ಕರೆಯನ್ವಯ ಇಂದು ರಾಷ್ಟ್ರವ್ಯಾಪಿ ಮನೆ ಮನೆ ಪ್ರತಿಭಟನೆಯನ್ನು ದಕ್ಷಿಣ‌ಕನ್ನಡ ಜಿಲ್ಲಾದ್ಯಂತ ನಡೆಸಲಾಯಿತು.

ಕೇಂದ್ರ ರಾಜ್ಯ ಸರಕಾರಗಳು ಕೋವಿಡ್ ನಿಯಂತ್ರಿಸುವಲ್ಲಿ ಹಳಿ ತಪ್ಪಿವೆ. ಸರಕಾರದ ಸಾಲು ಸಾಲು ವೈಫಲ್ಯಗಳು  ಘೋರವಾದ ಇತಿಹಾಸ ನಿರ್ಮಿಸುತ್ತಿದೆ. ಜನರು ಆಕ್ಸಿಜನ್, ಲಸಿಕೆ ಸಿಗದೆ ಸಾಯುತ್ತಿದ್ದಾರೆ. ಸ್ಮಶಾನಗಳು ತುಂಬಿ ತುಳುಕುತ್ತಿವೆ ಜನರ ನೆರವಿಗೆ ಬರಬೇಕಿದ್ದ ಸರಕಾರ ಮಕಾಡೆ ಮಲಗಿದೆ ಎಂದು ಸಂತೋಷ್ ಬಜಾಲ್ ಆರೋಪಿಸಿದ್ದಾರೆ.

ಡಿವೈಎಫ್ಐ, ಎಸ್ಎಫ್ಐ, ಜನವಾದಿ ಮಹಿಳಾ ಸಂಘಟನೆಯ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗಳ ಅಧೀನದಲ್ಲಿರುವ ಎಲ್ಲಾ ಘಟಕಗಳ ಕಾರ್ಯಕರ್ತರು ತಮ್ಮ ತಮ್ಮ ಮನೆಗಳಿಂದಲೇ ಕೇಂದ್ರ ಸರಕಾರದ ವಿರುದ್ದ ಘೋಷಣೆಗಳಿರುವ ಭಿತ್ತಿಪತ್ರ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು ಎಂದು ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply