ಬೆಂಗಳೂರು – ದೇಶದಲ್ಲಿ ದಿನೇ ದಿನೇ ಕರೋನ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ದೇಶದಲ್ಲಿ ಏಪ್ರಿಲ್ 11 ರಿಂದ ಏಪ್ರಿಲ್ 14 ರ ವರೆಗೂ ನಾಲ್ಕು ದಿನಗಳ ಕಾಲ ಮಹಾ ಲಸಿಕಾ ಉತ್ಸವ ಆಚರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 6.30 ಕೋಟಿ ಜನಸಂಖ್ಯೆ ಹೊಂದಿರುವ ಕರ್ನಾಟಕದಲ್ಲಿ ಈ ವರೆಗೆ ಎಷ್ಟ ಜನ ಲಸಿಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.
ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಕರೋನಾ ಲಸಿಕಾ ಕಾರ್ಯಕ್ರಮದಲ್ಲಿ ಈ ವರೆಗೂ ರಾಜ್ಯದಲ್ಲಿ ಈವರೆಗೆ ಒಟ್ಟು 50 ಲಕ್ಷ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ. 45,13,857 ಜನರು ಮೊದಲ ಡೋಸ್ ಹಾಗೂ 5,02,838 ಜನರು ಎರಡೂ ಡೋಸ್ ಪಡೆದಿದ್ದಾರೆ. ಇನ್ನೂ 11 ರಿಂದ ಆರಂಭವಾಗುವ ಲಸಿಕಾ ಮಹಾ ಅಭಿಯಾನದಲ್ಲಿ ಎಷ್ಟು ಜನರಿಗೆ ಲಸಿಕೆ ನೀಡಲಾಗುತ್ತೆ ಎನ್ನುವುದು ಎಲ್ಲರಿಗೂ ಕುತೂಹಲ ಮೂಡಿಸಿದೆ.
ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow
ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/