ನವದೆಹಲಿ – ಕಳೆದ ಕೆಲ ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಭಾರಿ ಬದಲಾವಣೆ ಆಗುತ್ತಿದೆ. ಕೇಂದ್ರ ಬಜೆಟ್ ಮಂಡನೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಹೆಚ್ಚಳ ಉಂಟಾಗಿದೆ.
ಪ್ರತಿ ಲೀಟರ್ಗೆ ಪೆಟ್ರೋಲ್ಗೆ 2.5ರೂ ಮತ್ತು ಡಿಸೇಲ್ಗೆ ಪ್ರತಿ ಲೀಟರ್ ಡಿಸೇಲ್ಗೆ 4 ರೂ ಹೆಚ್ಚಳವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಬೆಲೆಗಳು ಇಂದು ಮಧ್ಯರಾತ್ರಿಯಿಂದಲೇ ಆರಂಭವಾಗಲಿದೆ. ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ದರದಲ್ಲಿ ಹೆಚ್ಚಳ ಮಾಡುವುದರ ಬಗ್ಗೆ ತಿಳಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ತೈಲ್ ದಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆದಾಯ ದೊರೆಯುತ್ತದೆ, ಇದರಿಂದ ಆರ್ಥಿಕತೆ ಸುಧಾರಣೆ ಹೊಂದುತ್ತದೆ, ಆದರಿಂದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡುತ್ತದೆ.