ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ

0

ಮೈಸೂರು-

ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಈ ಹಿಂದೆ ರೋಹಿಣಿ ಸಿಂಧೂರಿ ಅವರ ಮೇಲೆ ಸಾರಾ ಮಹೇಶ್ ನೀಡಿದ್ದ ದೂರಿನ ಹಿನ್ನಲೆಯಲ್ಲಿ, ವಿಚಾರಣೆ ನಡೆಸುವಂತೆ ಸರ್ಕಾರ ಆದೇಶ ಮಾಡಿದೆ. ಜಿಲ್ಲಾಧಿಕಾರಿ ಅಧಿಕೃತ ನಿವಾಸದಲ್ಲಿ ರೋಹಿಣಿ ಸಿಂಧೂರಿ ಅವರು ಸ್ವಿಮಿಂಗ್ ಫೂಲ್ ನಿರ್ಮಾನ ಮಾಡಿದ್ದರು. ಈ ಹಿನ್ನಲಯಲ್ಲಿ ಸಾರಾ ಮಹೇಶ್ ಅವರು ಜಿಲ್ಲಾಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಕಾರಣ ಈಗ ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಸರಕಾರಿ ನಿವಾಸದ ನಡೆದಿದ್ದೆ ಎನ್ನಲಾಗುತ್ತಿರುವ ನವೀಕರಣ ವಿಚಾರದಲ್ಲಿ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಪ್ರಾದೇಶಿಕ ಆಯುಕ್ತರಿಗೆ ತನಿಖೆಗೆ ಆದೇಶಿಸಿದ್ದಾರೆ.

ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿ ಇಲ್ಲದೆ ಕಟ್ಟಡ ನವೀಕರಿಸಿ ನಿವಾಸದ ನೆಲ ಹಾಸಿಗೆಯ ನವೀಕರಣದ ಮಾಡಲಾಗಿದೆ ಎಂದು ಶಾಸಕ ಸಾರಾ ಮಹೇಶ್ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿ 7 ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿಯಿಂದ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ಬಂದಿದೆ. ಹೀಗಾಗಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ…

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply