ವಿಜಯನಗರ – ನೂತನ ವಿಜಯನಗರ ಜಿಲ್ಲೆಯ ಜಿಲ್ಲಾಮಮಟ್ಟದ ಕಚೇರಿಗಳನ್ನು ಆರಂಭಿಸುವ ನಿಟ್ಟಿನಲ್ಲಿ ಹೊಸಪೇಟೆಯಲ್ಲಿ ದೊಡ್ಡ ದೊಡ್ಡ ಕಾಂಪ್ಲೆಕ್ಸ್‍ಗಳನ್ನು ಗುರುತಿಸಿ ವರದಿ ನೀಡುವಂತೆ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್ ಅವರು ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರಿಗೆ ಸೂಚಿಸಿದರು.

ದೊಡ್ಡ ದೊಡ್ಡ ಕಾಂಪ್ಲೆಕ್ಸ್‍ಗಳನ್ನು ಗುರುತಿಸುವುದರಿಂದ ಒಂದೇಡೆ ಬಹಳಷ್ಟು ಕಚೇರಿಗಳು ಆರಂಭಿಸಲು ಅನುಕೂಲವಾಗುತ್ತದೆ ಎಂದು ಹೇಳಿದ ಅವರು ವಿವಿಧ ಇಲಾಖೆಗಳು ಸ್ಥಾಪಿಸಲಾಗಿರುವ ಸಮುದಾಯ ಭವನಗಳಲ್ಲಿಯೂ ಕಚೇರಿಗಳನ್ನು ಪ್ರಾರಂಭಿಸಬಹುದಾಗಿದೆ; ಸಮುದಾಯಭವನಗಳನ್ನು ಗುರುತಿಸಿ ವರದಿ ನೀಡಿ ಎಂದು ಅವರು ಸೂಚಿಸಿದರು. ಇದರ ಜೊತೆಗೆ ತಮ್ಮ ತಮ್ಮ ಇಲಾಖೆಗಳ ಕಚೇರಿಯು ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಇನ್ನೀತರ ಮಾಹಿತಿಗಳು ಅಗತ್ಯವಿದ್ದಲ್ಲಿ ಅದರ ಮಾಹಿತಿಯೂ ತಾವು ನೀಡಬಹುದಾಗಿದೆ ಎಂದು ಅವರು ಹೇಳಿದ್ದಾರೆ..

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply