ಬೆಂಗಳೂರು- ಜನರ ಜೀವ ಉಳಿಸುವ ಕರೋನಾ ಲಸಿಕೆಯನ್ನು ದುಡ್ಡಿನ ಆಸೆಗಾಗಿ ಕಳ್ಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸ ಲಾಗುವುದು ಎಂದು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈಗಾಗಲೇ ಲಸಿಕೆಯನ್ನು ಅಕ್ರಮವಾಗಿ ಸಂಗ್ರಹ ಮಾಡಿರುವುದು, ಸಾಗಾಟ ಮಾಡಿರುವುದು ಕಂಡುಬಂದಿದೆ. ಈ ಅಪರಾಧದಲ್ಲಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಶಾಮೀಲಾಗಿರುವುದು ಕೂಡ ಪತ್ತೆಯಾಗಿದೆ.  ಇದು ನಿಜಕ್ಕೂ ಅಕ್ಷಮ್ಯ ಅಪರಾಧ.  ಜನರ ಜೀವ ಉಳಿಸುವ ಲಸಿಕೆಯನ್ನು ಹಣದ ಆಸೆಗೆ ಅಕ್ರಮವಾಗಿ ಮಾರಾಟ ಮಾಡಿದರೆ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ರಾಜ್ಯಕ್ಕೆ ಕೆಲ ದಿನಗಳಲ್ಲಿ ಲಸಿಕೆ ಸರಬರಾಜು ಆಗಲಿದೆ.  ಯಾವ ರೀತಿ ರೆಮ್ ಡಿಸಿವಿರ್ ಗೆ ಇದ್ದ ಬೇಡಿಕೆ ಕಡಿಮೆಯಾಯಿತೋ ಅದೇ ರೀತಿ ಲಸಿಕೆಗೂ ಬೇಡಿಕೆ ಕಡಿಮೆಯಾಗಲಿದೆ ಎಂಬ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply