ಮಂಡ್ಯ- ಮಂಡ್ಯದ ಗುತ್ತಲು ಭಾಗದಲ್ಲಿ ನಿರಂತರವಾಗಿ ಗೋ ಹತ್ಯೆ ನಡೆಯುತ್ತಿದ್ದು, ಇದನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇದರಿಂದ ಬೇಸತ್ತ ಹಿಂದೂ  ಪರ ಸಂಘಟನೆಯ ಕಾರ್ಯಕರ್ತರು ಖುದ್ದು ಎಲ್ಲಾ ಮಾಹಿತಿಯನ್ನು ಕಲೆಹಾಕಿ ಪೊಲೀಸರಿಗೆ ನೀಡಿದ್ದಾರೆ. ಆದ್ರೆ ಪೊಲೀಸರು ಮಾತ್ರ ಅವರ ಮೇಲೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಪೊಲೀಸರ ಈ‌ ಕ್ರಮ ಖಂಡಿಸಿ ಪೊಲೀಸ್ ಠಾಣೆ ಮುಂದೆ ಹೋರಾಟ ನಡೆಸಲಾಯಿತು. ಸ್ಥಳಕ್ಕೆ ಆಗಮಿಸಿದ ಉನ್ನತ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ನಾಳೆಯಿಂದ ಅಕ್ರಮ ಕಸಾಯಿಖಾನೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸುವ ಭರವಸೆ ನೀಡಿದರು. ಪೊಲೀಸರ ಬರವಸೆ ಬಳಿಕ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಿಲ್ಲಿಸಿದ್ದಾರೆ.

Leave A Reply