ಶಿವಮೊಗ್ಗ- ದೇವಾಂಗ ಸಮಾಜದ ಬಹುದಿನಗಳ ಬೇಡಿಕೆಯಾದ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯದಲ್ಲಿ ಒತ್ತಡ ಹೆಚ್ಚಾಗಿದೆ. ರಾಜ್ಯದ ಪ್ರತಿ ಜಿಲ್ಲೆ ತಾಲೂಕಿನಲ್ಲಿ ದೇವಾಂಗ ಸಮಾಜದ ಭಾಂದವರು ಪ್ರತಿಭಟನೆ ಮಾಡಿ ಸರ್ಕಾದ ಗಮನ ಸೆಳೆದಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಾಕಷ್ಟು ಒತ್ತಾಯಗಳು ಸಹ ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಸಹ ಶಿವಮೊಗ್ಗ ಜಿಲ್ಲಾ ದೇವಾಂಗ ಸಮಾಜದ ವತಿಯಿಂದ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ನವರಿಗೆ ಇಂದು ಮನವಿಯನ್ನು ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಸಿ ಎಮ್ ಮನವಿಯನ್ನು ಸ್ವೀಕರಿಸಿ ಮುಂದಿನ ದಿನದಲ್ಲಿ ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಬರವಸೆ ನೀಡಿದ್ದಾರೆ.