ಶಿರಸಿ – ಗಣಿ ನಾಡು ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ ನೂತನ ವಿಜಯನಗರ ಜಿಲ್ಲೆ ವಿಭಜನೆ ಮಾಡುವ ಮೂಲಕ ರಾಜ್ಯದ ನಾನಾ ಜಿಲ್ಲೆಯಲ್ಲಿ ಜಿಲ್ಲಾ ವಿಭಜನೆಯ ಕೂಗು ಕೇಳೆಬಂದಿದೆ.‌ ಒಂದು ಕಡೆ ಬೆಳಗಾವಿ ಜಿಲ್ಲೆ ವಿಭಜನೆ ಮಾಡುವ ಕೂಗು ಹಲವಾರು ದಶಕಗಳಿಂದ ಕೇಳಿಬಂದಿದ್ದು, ಈಗ ಬೆಳಗಾವಿ ಜಿಲ್ಲಾ ವಿಭಜನೆ ಮಾಡುವಂತೆ ಸಹ ಕೂಗೂ ಜೋರಾಗಿದೆ. ಇತ್ತ ಉತ್ತರ ಕನ್ನಡ ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸುವಂತೆ ಒತ್ತಾಯ ತಾರಕ್ಕೆ ಏರುವ ಲಕ್ಷಣಗಳು ಕಂಡುಬಂದಿವೆ. ಇಂದು ಶಿರಸಿ ಪ್ರತ್ಯೇಕ ಜಿಲ್ಲೆ ಮಾಡುವಂತೆ ಆಗ್ರಹಿಸಿ , ಶಿರಸಿ  ಜಿಲ್ಲಾ ಹೋರಾಟ ಸಮಿತಿ ಶಿರಸಿ ಬಂದ್ ಗೆ ಕರೆ ನೀಡಿದೆ. ಶಿರಸಿ ಬಂದ್ ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ನಗರದಲ್ಲಿ ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿದ್ದಾರೆ. ಔಷಧ ಅಂಗಡಿ ಹೊರತುಪಡಿಸಿ ಉಳಿದ ಮಳಿಗೆಗಳು ಸಂಪೂರ್ಣ ಬಂದ್ ಆಗಿವೆ. ಹಳೆ ಬಸ್ ನಿಲ್ದಾಣದಿಂದ ಬಸ್ ಗಳ ಓಡಾಟ ಸ್ಥಗಿತಗೊಳಿಸಲಾಗಿದೆ. ಸರ್ಕಾರಿ ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಶಾಲೆಗಳು ಎಂದಿನಂತೆ ತೆರೆದುಕೊಂಡಿದೆ.  ಹಳೆ ಬಸ್ ನಿಲ್ದಾಣದ ವೃತ್ತದಲ್ಲಿ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ ಪ್ರತಿಭಟನಾಕಾರರು ಜಮಾಯಿಸಿದ್ದು ಪ್ರತಿಭಟನೆ ಆರಂಭಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply