ಬಳ್ಳಾರಿ –ಬಲಿಜ ಸಮಾಜವು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದೆ ಉಳಿದಿದೆ.ಹಾಗಾಗಿ ನಮ್ಮನ್ನು 2ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಬಳ್ಳಾರಿ ಜಿಲ್ಲಾ ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ತಿಪ್ಪೇಸ್ವಾಮಿ ಮನವಿ ಮಾಡಿದರು. ಬಲಿಜ ಸಮಾಜವು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದೆ ಉಳಿದಿದೆ. ಹಾಗಾಗಿ ನಮ್ಮನ್ನು ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂದು ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದರು. ಈ ಹಿಂದೆ ಎರಡು ಮೂರು ಬಾರಿ ಬಿ.ಎಸ್.ಯಡಿಯೂರಪ್ಪ ಅವರು ಬಲಿಜ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವ ಭರವಸೆ ನೀಡಿದ್ದರು. ಆದ್ರೆ ಇದುವರೆಗೂ ಆ ಭರವಸೆ ಈಡೇರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು.

suddinow.com
suddinow.com